ADVERTISEMENT

ಉತ್ತರ ಹುಡುಕಾಟದಿಂದ ವಿಜ್ಞಾನ ಬೆಳವಣಿಗೆ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2012, 7:55 IST
Last Updated 9 ಮಾರ್ಚ್ 2012, 7:55 IST

ಪುತ್ತೂರು: ವಿಜ್ಞಾನ ಮತ್ತು ತಂತ್ರಜ್ಞಾನ ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಪ್ರಶ್ನೆಗಳಿಗೆ ಉತ್ತರ ಹುಡುಕುತ್ತಾ ಹೋಗುವುದರಿಂದ ವಿಜ್ಞಾನ ಬೆಳೆಯುತ್ತದೆ, ಹೊಸ ಆವಿಷ್ಕಾರ ಸಾಧ್ಯವಾಗುತ್ತದೆ ಎಂದು ಫಿಲೋಮಿನಾ ಕಾಲೇಜಿನ ಉಪನ್ಯಾಸಕ ಪ್ರೊ.ಎನ್.ಸುರೇಶ್ ರಾವ್ ಹೇಳಿದರು.

ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಘಟಕದ ಸಹಯೋಗದಲ್ಲಿ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ವಿಜ್ಞಾನ ವಸ್ತು ಪ್ರದರ್ಶನ ಮತ್ತು ಪ್ರಯೋಗ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ವಿಜ್ಞಾನ ಪರಿಪತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಕಡಮಜಲು ಸುಭಾಸ್ ರೈ  ಉದ್ಘಾಟಿಸಿದರು. ಫಿಲೋಮಿನಾ ಕಾಲೇಜಿನ ಸಂಚಾಲಕ ಜೆರಾಲ್ಡ್ ಡಿ~ಸೋಜಾ ಅಧ್ಯಕ್ಷತೆ ವಹಿಸಿದ್ದರು.  ಕಾಲೇಜಿನ ಪ್ರಾಂಶುಪಾಲ ಲಿಯೋ ನೊರೋನ್ಹ, ಕಾಲೇಜು ವಿಜ್ಞಾನ ಸಂಘದ ನಿರ್ದೇಶಕ ಎ.ಪಿ.ರಾಧಾಕೃಷ್ಣ , ವಿಜ್ಞಾನ ಸಂಘದ ಅಧ್ಯಕ್ಷ ಸತೀಶ್ಚಂದ್ರ, ಕಾರ್ಯದರ್ಶಿ ನಿವೇದಿತಾ, ಶ್ರುತಿ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.