ADVERTISEMENT

ಉಪ್ಪಿನಂಗಡಿ ಘಟನೆ- ಬಿಜೆಪಿ ಖಂಡನೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2012, 11:10 IST
Last Updated 24 ಜನವರಿ 2012, 11:10 IST

ಸುಳ್ಯ: ಉಪ್ಪಿನಂಗಡಿಯಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ಹಿಂದೂ ಸಮಾಜೋತ್ಸವ ಸಂದರ್ಭ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಎಂಬ ಹೆಸರಿನಲ್ಲಿ ಕಲ್ಲು ತೂರಾಟ ನಡೆಸಿ, ಮಾರಕಾಯುಧಗಳಿಂದ ಹಲ್ಲೆ ನಡೆಸಿ, ದಾಳಿ ಮಾಡಿರುವುದನ್ನು ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಶಾಸಕ ಎಸ್.ಅಂಗಾರ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಎಸ್.ಎನ್.ಮನ್ಮಥ ಖಂಡಿಸಿದ್ದಾರೆ.

ಸಭೆಯ ಮೇಲೆ ದಾಳಿ ನಡೆಸಿ ಭಯಾನಕ ವಾತಾವರಣ ಸೃಷ್ಟಿಸಿರುವವರನ್ನು ಕೂಡಲೇ ಬಂಧಿಸಿ ಸೂಕ್ತಕ್ರಮ ಕೈಗೊಳ್ಳಬೇಕು. ಹಿಂದೂ ಮುಖಂಡರಾದ ಡಾ.ಪ್ರಭಾಕರ ಭಟ್, ನ.ಸೀತಾರಾಮ ಮತ್ತಿತರರ ಮೇಲೆ ಪೋಲೀಸರು ಕೇಸು ದಾಖಲಿಸಿರುವುದು ಹಿಂದೂ ಸಮಾಜವನ್ನು ದಮನ ಮಾಡುವ ನೀತಿ. ಇವರ ಮೇಲೆ ದಾಖಲಿಸಲಾದ ಕೇಸನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು. ತಪ್ಪಿದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.