ADVERTISEMENT

ಎಲ್ಲಾ ರಂಗದಲ್ಲೂ ಭ್ರಷ್ಟಾಚಾರ: ಹೆಗ್ಡೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2011, 12:10 IST
Last Updated 24 ಜನವರಿ 2011, 12:10 IST

ಕಾಪು (ಕಟಪಾಡಿ): ಪ್ರಜಾಪ್ರಭುತ್ವದ ಆಧಾರ ಸ್ಥಂಭಗಳಾದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾರಂಗ ಎಲ್ಲದರಲ್ಲೂ ಭ್ರಷ್ಟಾಚಾರ ಮೇರೆ ಮೀರಿದೆ. ರಾಜಕೀಯ ವಲಯಕ್ಕೆ ಭ್ರಷ್ಟಾಚಾರ ನಿಗ್ರಹಿಸಲು ಸಜ್ಜನ ಯುವಕರ ಅಗತ್ಯ ಇದೆ ಎಂದು ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಅಭಿಪ್ರಾಯ ಪಟ್ಟರು.

ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪು ರಾಜೀವ ಭವನದಲ್ಲಿ ಭಾನುವಾರ ಜರುಗಿದ ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯುವಕರಲ್ಲಿ ರಾಜಕೀಯ ಮಹತ್ವಾಕಾಂಕ್ಷೆ ಇರಬೇಕು. ಈ ದೇಶಕ್ಕೆ ಈ ಹಿಂದೆ ಕಾಂಗ್ರೆಸ್ ನಾಯಕರು ತಮ್ಮ ಪ್ರಾಣ ತ್ಯಾಗ ಮಾಡಿ ಮಾದರಿ ಆಡಳಿತ ನೀಡಿದ್ದಾರೆ.
 
ಕಾಂಗ್ರೆಸ್ ಮತ್ತೆ ಗತ ವೈಭವ ಕಾಣಲು ಸಜ್ಜನ ಯುವಕರ ಅಗತ್ಯ ಇದೆ ಎಂದರು. ಕಾಪು ಯುವಕ ಕಾಂಗ್ರೆಸ್ ಅಧ್ಯಕ್ಷ ನವೀನ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಯುವ ಕಾಂಗ್ರೆಸ್ ರಾಜ್ಯಕಾರ್ಯದರ್ಶಿ ಅಮೃತ್ ಶೆಣೈ, ಕುಟ್ಟಿ ಪೂಜಾರಿ, ಪ್ರಸನ್ನ ಕುಮಾರ್ ಶೆಟ್ಟಿ, ಮುರಳಿ ಶೆಟ್ಟಿ, ದಿವಾಕರ ಶೆಟ್ಟಿ, ಗೀತಾ ವಾಗ್ಳೆ, ಅಬ್ದುಲ್ ಅಝೀಝ್ಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.