ADVERTISEMENT

ಕಾರ್ಮಿಕ ಸಂಘಟನೆಗಳಿಂದ ಜೈಲ್ ಭರೊ

ಫೆ.20, 21ರ ಸಾರ್ವತ್ರಿಕ ಮುಷ್ಕರ ಹಿನ್ನೆಲೆ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2012, 10:04 IST
Last Updated 20 ಡಿಸೆಂಬರ್ 2012, 10:04 IST

ಮಂಗಳೂರು: ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಮುಂದಿನ ಫೆಬ್ರುವರಿ 20 ಮತ್ತು 21ರಂದು ನಡೆಸಲು ಉದ್ದೇಶಿಸಿರುವ ಸಾರ್ವತ್ರಿಕ ಮುಷ್ಕರವನ್ನು ಯಶಸ್ವಿಗೊಳಿಸಬೇಕು ಎಂಬ ಸಂದೇಶ ನೀಡುವ ಸಲುವಾಗಿ ಬುಧವಾರ ವಿವಿಧ ಕಾರ್ಮಿಕ ಸಂಘಟನೆಗಳಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ, ಮುತ್ತಿಗೆ ಮತ್ತು ಜೈಲ್ ಭರೊ ನಡೆಯಿತು.

ನೂರಾರು ಪ್ರತಿಭಟನಾಕಾರರನ್ನು ಬಂಧಿಸಿ ಬಳಿಕ ಬಿಡುಗಡೆಗೊಳಿಸಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ನಾಯಕ ಬಿ.ಮಾಧವ ಅವರು, ಕಾರ್ಮಿಕರ ಕನಿಷ್ಠ ವೇತನವನ್ನು ಮಾಸಿಕ 10 ಸಾವಿರ ರೂಪಾಯಿಗೆ ಹೆಚ್ಚಿಸಬೇಕೆಂಬ ಬೇಡಿಕೆಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಕಾರ್ಮಿಕ ಪರ ಕಾನೂನುಗಳನ್ನು ಮಾಲಕರ ಪರವಾಗಿ ತಿದ್ದುಪಡಿ ಮಾಡಲಾಗುತ್ತಿದೆ ಎಂದು ಟೀಕಿಸಿದರುಬಿಎಂಎಸ್‌ನ ವಿಶ್ವನಾಥ ಶೆಟ್ಟಿ, ಎಐಟಿಯುಸಿಯ ಶೇಖರ್, ಸಿಐಟಿಯುನ ವಸಂತ ಆಚಾರಿ, ಬಿಇಎಫ್‌ಐನ ಬಿ.ಎಂ.ಮಾಧವ ಇತರರು ಮಾತನಾಡಿದರು. ವಿವಿಧ ಸಂಘಟನೆಗಳ ಮುಖಂಡರಾದ ಕೆ.ಆರ್.ಶ್ರೀಯಾನ್, ಜೆ.ಬಾಲಕೃಷ್ಣ ಶೆಟ್ಟಿ, ಯು.ಬಿ.ಲೋಕಯ್ಯ, ಶಿವಪ್ಪ, ಸೀತಾರಾಂ ಬೇರಿಂಜೆ, ಎಚ್.ವಿ.ರಾವ್, ವಿನೋದ್ ಕುಮಾರ್, ಪುರಂದರ ಇತರರು ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.