ADVERTISEMENT

ಕ್ರೀಡೆ, ಯೋಗದಿಂದ ಸ್ವಸ್ಥ ಜೀವನ

​ಪ್ರಜಾವಾಣಿ ವಾರ್ತೆ
Published 21 ಜನವರಿ 2012, 8:10 IST
Last Updated 21 ಜನವರಿ 2012, 8:10 IST

ಬೆಳ್ತಂಗಡಿ: ನಿರಂತರ ಕ್ರೀಡೆ ಮತ್ತು ಯೋಗಾಭ್ಯಾಸದಿಂದ ಆರೋಗ್ಯಪೂರ್ಣ ಜೀವನ ನಡೆಸಲು ಸಾಧ್ಯ ಎಂದು ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಹೇಳಿದರು.

ಬೆಂಗಳೂರಿನ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಆಶ್ರಯದಲ್ಲಿ ಉಜಿರೆಯಲ್ಲಿ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಏರ್ಪಡಿಸಲಾದ ರಾಜ್ಯ ಮಟ್ಟದ ಯೋಗಾಸನ ಮತ್ತು ಟೆನ್ನಿಕಾಯ್ಟ ಪಂದ್ಯಾಟವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಕಾಲೇಜು ವಿದ್ಯಾರ್ಥಿಗಳು ಇತರರಿಗೂ ಯೋಗಾಭ್ಯಾಸವನ್ನು ಕಲಿಸಿ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಅವರು ಸಲಹೆ ನೀಡಿದರು.

ಅತಿಥಿಯಾಗಿದ್ದ ಮೈಸೂರಿನ ವಿಧಾನ ಪರಿಷತ್ ಸದಸ್ಯ ಸಿ.ರಮೇಶ್ ಮಾತನಾಡಿ ವಿದ್ಯಾರ್ಥಿಗಳು ಶಿಸ್ತು ಮತ್ತು ದೇಶಪ್ರೇಮ ಬೆಳೆಸಿಕೊಳ್ಳಬೇಕು. ಖಾಸಗಿ ವಿದ್ಯಾ ಸಂಸ್ಥೆಗಳಲ್ಲಿ ಉತ್ತಮ ಮೂಲಭೂತ ಸೌಲಭ್ಯಗಳಿದ್ದು ಅದರ ಸದುಪಯೋಗ ಪಡಿಸಿಕೊಂಡು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ.ಯಶೋವರ್ಮ ಮತ್ತು ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.