ಬಂಟ್ವಾಳ: ತಾಲ್ಲೂಕಿನಾದ್ಯಂತ ಈಗಾಗಲೇ ಮುಂಗಾರು ಮಳೆ ಆರಂಭಗೊಂಡಿದ್ದು, ಮಲೇರಿಯಾ -ಡೆಂಗೆ ಮತ್ತಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಾ.ಪಂ.ಅಧ್ಯಕ್ಷೆ ಲಲಿತಾ ನಾಯ್ಕ ಅವರು ಸೂಚಿಸಿದ್ದಾರೆ.
ತಾಲೂಕಿನ ಬಿ.ಸಿ.ರೋಡ್ ತಾಲ್ಲೂಕು ಪಂಚಾಯಿತಿಯಲ್ಲಿ ಬುಧವಾರ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ ಅವರಿಂದ ಈ ಬಗ್ಗೆ ಮಾಹಿತಿ ಕೇಳಿದ ಅವರು ಎಲ್ಲೆಲ್ಲಿ ಡೆಂಗೆ, ಮಲೇರಿಯಾ, ಇಲಿಜ್ವರ ಮತ್ತಿತರ ರೋಗಗಳು ಪತ್ತೆಯಾಗಿವೆ ಎಂಬ ಬಗ್ಗೆ ವಿವರ ಮತ್ತು ಇವುಗಳ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ಒದಗಿಸುವಂತೆ ಸೂಚಿಸಿದರು.
ಇದೇ ವೇಳೆ ಪುಂಜಾಲಕಟ್ಟೆ ಮತ್ತು ಸಿದ್ಧಕಟ್ಟೆ ಮೆಸ್ಕಾಂ ಶಾಖೆ ವ್ಯಾಪ್ತಿಯ ವಿದ್ಯುತ್ ಸಮಸ್ಯೆಗಳ ಬಗ್ಗೆ ಸಭೆಯಲ್ಲಿದ್ದ ಮೆಸ್ಕಾಂ ಎಂಜಿನಿಯರ್‌ಗಳೊಂದಿಗೆ ಮಾತುಕತೆ ನಡೆಸಿದರು. ತಾ.ಪಂ.ಉಪಾಧ್ಯಕ್ಷ ಆನಂದ ಶಂಭೂರು, ಸ್ಥಾಯಿ ಸಮಿತಿ ಅಧ್ಯಕ್ಷ ಸಂಪತ್‌ಕುಮಾರ್ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ಪೂಜಾರಿ, ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.