ADVERTISEMENT

ದ.ಕ ಜಿಲ್ಲೆ ಅಧಿಕಾರಿಗಳ ಜತೆ ಡಿವಿಎಸ್ ಚರ್ಚೆ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2012, 9:50 IST
Last Updated 17 ಮಾರ್ಚ್ 2012, 9:50 IST

ಮಂಗಳೂರು: ಜಿಲ್ಲೆಯಲ್ಲಿ ಕುಡಿಯವ ನೀರಿನ ಸಮಸ್ಯೆ ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳು, ಮಾರ್ಚ್‌ನಲ್ಲಿ ಕೊನೆಗೊಳ್ಳಬೇಕಾದ ಕಾಮಗಾರಿಗಳು, ನಕ್ಸಲ್ ನಿಗ್ರಹ ಸಹಿತ ಹಲವು ಆಡಳಿತಾತ್ಮಕ ವಿಷಯಗಳ ಬಗ್ಗೆ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಶುಕ್ರವಾರ ಬೆಳಿಗ್ಗೆ ನಗರದ ನಿವಾಸದಲ್ಲಿ ಜಿಲ್ಲಾಧಿಕಾರಿ ಎನ್.ಎಸ್.ಚನ್ನಪ್ಪ ಗೌಡ, ಜಿ.ಪಂ. ಸಿಇಒ ಕೆ.ಎನ್.ವಿಜಯಪ್ರಕಾಶ್, ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಜತೆ ಚರ್ಚೆ ನಡೆಸಿದರು.

ಲೋಕಸಭಾ ಉಪ ಚುನಾವಣೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಅವರು ಗುರುವಾರ ರಾತ್ರಿ ಮಂಗಳೂರಿನ ಮನೆಗೆ ಬಂದು ತಂಗಿದ್ದರು. ಶುಕ್ರವಾರ ಬೆಳಿಗ್ಗೆ  ಅಧಿಕಾರಿಗಳನ್ನು ಕಡತಗಳ ಸಮೇತ ಕರೆಸಿಕೊಂಡು 1 ಗಂಟೆಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿದರು.
 
ಯಾವ ತಾಲ್ಲೂಕಿನಲ್ಲೂ ಕುಡಿಯುವ ನೀರಿಗೆ ಅಭಾವವಾಗಕೂಡದು ಎಂದು  ತಾಕೀತು ಮಾಡಿದ ಸಿಎಂ, ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು. ರಾಜ್ಯ ಬ್ಯಾರಿ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ಕೊಲೆಗೆ ಯತ್ನಿಸಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಬೇಕು ಎಂದು ಪೊಲೀಸ್ ಆಯುಕ್ತರಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.