ADVERTISEMENT

`ಧರ್ಮಸ್ಥಳ ಯೋಜನೆಯಿಂದ ಅಭಿವೃದ್ಧಿ'

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2013, 7:00 IST
Last Updated 6 ಏಪ್ರಿಲ್ 2013, 7:00 IST

ಕಿನ್ನಿಗೋಳಿ (ಮೂಲ್ಕಿ): `ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಭಾಗದ ಜನರು ಸ್ವಾವಲಂಬಿಗಳಾಗಿ ಬದುಕುತ್ತಿದ್ದಾರೆ. ಗ್ರಾಮಸ್ಥರ ಹಿತ ಕಾಯಲು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದ್ದು ಅದನ್ನು ಗ್ರಾಮಸ್ಥರು ಸದ್ಬಳಕೆ ಮಾಡಿಕೊಳ್ಳಬೇಕು' ಎಂದು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಕೊಡೆತ್ತೂರು ಭುವಮಾಭಿರಾಮ ಉಡುಪ ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಿನ್ನಿಗೋಳಿ ವಲಯದ ಸದಸ್ಯರಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆ ಯೋಜನೆಯ ನೋಂದಣಿ ಪತ್ರಗಳನ್ನು ಶುಕ್ರವಾರ ವಿತರಿಸುವ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಿನ್ನಿಗೋಳಿ ಜನಜಾಗೃತಿ ವೇದಿಕೆಯ ಅಧ್ಯಕ್ಷ ವೈ. ಯೋಗೀಶ್ ರಾವ್ ಅವರು ನೋಂದಾವಣೆ ಪತ್ರಗಳನ್ನು ಸದಸ್ಯರಿಗೆ ವಿತರಿಸಿದರು.
ಕಿನ್ನಿಗೋಳಿ ವಲಯ ಮೇಲ್ವಿಚಾರಕಿ ಲತಾ ಅಮೀನ್ ಯೋಜನೆಯ ಬಗ್ಗೆ ಮಾಹಿತಿ ನೀಡಿ 2013-14ನೇ ಸಾಲಿನ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆ ಯೋಜನೆಯಡಿಯಲ್ಲಿ 2492 ಕುಟುಂಬಗಳ 8348 ಸದಸ್ಯರಿಗೆ ಸುಮಾರು ರೂಪಾಯಿ 31,72,240 ಪ್ರೀಮಿಯಂ ನೋಂದಾವಣೆ ಮಾಡಲಾಗಿದೆ ಎಂದು ಹೇಳಿದರು.

ದೇವೇಂದ್ರ, ಒಕ್ಕೂಟದ ಅಧ್ಯಕ್ಷೆ ಯಶೋದಾ, ಸೇವಾ ಪ್ರತಿನಿಧಿಗಳಾದ ಉಷಾ ಜೆ. ಬಬಿತಾ ಸುವರ್ಣ, ಸುನೀತಾ ಶೆಟ್ಟಿ, ಶ್ರೀಕಲಾ, ಶಿಲ್ಪಾ, ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.