ADVERTISEMENT

ಪಿಲಾಂಕಟ್ಟೆ ರಸ್ತೆ ಅಭಿವೃದ್ಧಿ: ಬಿಜೆಪಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 30 ಮೇ 2012, 5:55 IST
Last Updated 30 ಮೇ 2012, 5:55 IST

ಬದಿಯಡ್ಕ: ಪಿಲಾಂಕಟ್ಟೆಯಿಂದ ಮಾರ್ಪನಡ್ಕ (ಜಯನಗರ)ಕ್ಕೆ ತೆರಳುವ ರಸ್ತೆಯನ್ನು ಕೂಡಲೇ ದುರಸ್ತಿ ಮಾಡಬೇಕೆಂದು ಕುಂಬ್ಡಾಜೆ ಗ್ರಾಮ ಪಂಚಾಯಿತಿ ಬಿಜೆಪಿ ಘಟಕ ಲೋಕೋಪಯೋಗಿ ಇಲಾಖೆಯನ್ನು ಒತ್ತಾಯಿಸಿದೆ.

ರಸ್ತೆ ಅಭಿವೃದ್ಧಿಯ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ದ್ದ್‌ದ ಈ ರಸ್ತೆಯನ್ನು ಕೆಲವು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಎಂಟನೇ ಸ್ಥಾನಕ್ಕೆ ತಳ್ಳಿದ್ದಾರೆ. ಇದರಿಂದಾಗಿ ರಸ್ತೆ ಕಾಮಗಾರಿ ಬಹಳಷ್ಟು ವಿಳಂಬವಾಗುವ ಸಾಧ್ಯತೆಯಿದೆ. ಇದೀಗ ರಸ್ತೆಯಲ್ಲಿ ದೊಡ್ಡ ಹೊಂಡಗಳು ಕಾಣಿಸಿಕೊಂಡಿದ್ದು, ಬಸ್ ಸಂಚಾರ ಮೊಟಕುಗೊಂಡಿದೆ.

ಅಗಲ್ಪಾಡಿ ಅನ್ನಪೂರ್ಣೇಶ್ವರಿ ಕ್ಷೇತ್ರ, ಅಗಲ್ಪಾಡಿ ಹೈಯರ್ ಸೆಕೆಂಡರಿ ಶಾಲೆ, ಕುಂಬ್ಡಾಜೆ ಗ್ರಾಪಂ ಕಚೇರಿ, ಕುಂಬ್ಡಾಜೆ ಗ್ರಾಮ ಕಚೇರಿ, ಆರೋಗ್ಯ ಕೇಂದ್ರ, ಕೃಷಿ ಭವನ, ಬ್ಯಾಂಕಿಂಗ್ ಸೌಲಭ್ಯಗಳಿಗೆ ಸಾರ್ವಜನಿಕರು ಇದೇ ರಸ್ತೆ ಮೂಲಕ ಸಂಚರಿಸಬೇಕಾಗಿದೆ.

ಈ ರಸ್ತೆ ಅಭಿವೃದ್ಧಿಗಾಗಿ ಸ್ಥಳೀಯರು ಕ್ರಿಯಾ ಸಮಿತಿ ರಚಿಸಿಕೊಂಡು ಹೋರಾಟ ನಡೆಸಿದ್ದರು. ಆದರೆ ಜನಪ್ರತಿನಿಧಿಗಳು ಈ ರಸ್ತೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ಬಿಜೆಪಿ ಕುಂಬ್ಡಾಜೆ ಘಟಕದ ಕಾರ್ಯದರ್ಶಿ ರಾಜೇಶ್ ಶೆಟ್ಟಿ ಆರೋಪಿಸಿದ್ದಾರೆ.

ಸಂಬಂಧಿಸಿದ ಇಲಾಖೆ ಕೂಡಲೇ ಈ ರಸ್ತೆಯ ದುರಸ್ತಿ ಕಾರ್ಯ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.