ADVERTISEMENT

ಪ್ರಧಾನಿ ಮೋದಿ ಭೇಟಿ: ಬಿಗಿ ಭದ್ರತೆ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2017, 8:37 IST
Last Updated 27 ಅಕ್ಟೋಬರ್ 2017, 8:37 IST

ಉಜಿರೆ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ 29ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲ್ಲೂಕಿನಾದ್ಯಂತ ಬಿಗಿ ಬಂದೋಬಸ್ತ್‌ ಕಲ್ಪಿಸಲು ಸಿದ್ಧತೆ ನಡೆಯುತ್ತಿವೆ.

ನಾರಾವಿ, ಕುತ್ಲೂರು, ದಿಡುಪೆ, ನಾವೂರು, ಸುಲ್ಕೇರಿ ಗ್ರಾಮಗಳು ನಕ್ಸಲ್ ಪೀಡಿತ ಪ್ರದೇಶದಲ್ಲಿರುವುದರಿಂದ ನಕ್ಸಲ್ ನಿಗ್ರಹ ಪಡೆಯವರು ಕೂಂಬಿಂಗ್ ನಡೆಸುತ್ತಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ಬರುವ ಹಿನ್ನಲೆಯಲ್ಲಿ ಉಜಿರೆಯಲ್ಲಿ ತಂಗಿದ್ದು, ಬಂದೋಬಸ್ತ್ ವ್ಯವಸ್ಥೆಗೆ ನಿರ್ದೇಶನವನ್ನು ಅಧಿಕಾರಿಗಳು ನೀಡುತ್ತಿದ್ದಾರೆ.

ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಗುರುವಾರ ಉಜಿರೆ ಹಾಗೂ ಧರ್ಮಸ್ಥಳಕ್ಕೆ ಭೇಟಿ ನೀಡಿ ಪೂರ್ವಭಾವಿ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದರು. ಉಜಿರೆಯಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಸಮಾವೇಶಕ್ಕೆ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದು, ಭಾನುವಾರ ಬೆಳಿಗ್ಗೆ 9 ಗಂಟೆವರೆಗೆ ಧರ್ಮಸ್ಥಳದಿಂದ ಉಜಿರೆಗೆ ವಾಹನ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.