ADVERTISEMENT

ಪ್ರಾಮಾಣಿಕರನ್ನೇ ಆಯ್ಕೆ ಮಾಡಿ: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2011, 8:50 IST
Last Updated 21 ಮಾರ್ಚ್ 2011, 8:50 IST
ಪ್ರಾಮಾಣಿಕರನ್ನೇ ಆಯ್ಕೆ ಮಾಡಿ: ಈಶ್ವರಪ್ಪ
ಪ್ರಾಮಾಣಿಕರನ್ನೇ ಆಯ್ಕೆ ಮಾಡಿ: ಈಶ್ವರಪ್ಪ   

ಕಟಪಾಡಿ: ಬೂತ್‌ಮಟ್ಟದಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಸುವಾಗ ಪ್ರಾಮಾಣಿಕ ಕಾರ್ಯಕರ್ತರಿಗೆ ಮನ್ನಣೆ ನೀಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ತಿಳಿಸಿದರು.ಭಾರತೀಯ ಜನತಾ ಪಾರ್ಟಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕಗಳ ವತಿಯಿಂದ ಉದ್ಯಾವರ ಹಫ್ಸಾ ಸಭಾಭವನದಲ್ಲಿ ಭಾನುವಾರ ಬಿಜೆಪಿ ಶಕ್ತಿಕೇಂದ್ರ ಪ್ರಮುಖರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ರಾಜಕಾರಣಿಗಳ ಭ್ರಷ್ಟಾಚಾರದ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ‘ಉಡುಪಿ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲೂ ಕೂಡಾ ಪ್ರಾಮಾಣಿಕ ಶಾಸಕರು, ಸಂಸದರನ್ನು ಆಯ್ಕೆಮಾಡುವುದಾಗಿ ಪಕ್ಷದ ಎಲ್ಲಾ ಕಾರ್ಯಕರ್ತರು ಪ್ರತಿಜ್ಞೆ ಮಾಡಬೇಕು’ ಎಂದು ಮನವಿ ಮಾಡಿದರು. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ವಿ.ಎಸ್.ಆಚಾರ್ಯ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಜೆ.ಪಾಲೆಮಾರ್, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು, ವಿಧಾನಸಭೆ ಉಪಸಭಾಧ್ಯಕ್ಷ ಯೋಗೀಶ್ ಭಟ್, ಬಿಜೆಪಿ ಮುಖಂಡ ಭಾನುಪ್ರಕಾಶ್, ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್.ಮೆಂಡನ್, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ,ಮಾಜಿ ಶಾಸಕರಾದ ಸುನೀಲ್‌ಕುಮಾರ್, ರುಕ್ಮಯ ಪೂಜಾರಿ, ಪ್ರತಾಪ್ ನಾಯಕ್, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿ ಅಮೀನ್, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ, ಶ್ಯಾಮಲಾ ಕುಂದರ್, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಇದ್ದರು.

ಕರಾವಳಿ ಜಿಲ್ಲೆ ಮಾದರಿ: ‘ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಪಕ್ಷದ ಸಂಘಟನೆಯ ದೃಷ್ಟಿಯಲ್ಲಿ ಮಂಚೂಣಿಯಲ್ಲಿದ್ದು, ರಾಜ್ಯಕ್ಕೆ ಮಾದರಿಯಾಗಿದೆ’ ಎಂದು ಈಶ್ವರಪ್ಪ ಶ್ಲಾಘಿಸಿದರು.
‘ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ. ಅಡ್ವಾಣಿ ಅವರಂತಹ ಪ್ರಾಮಾಣಿಕ ಜನಪ್ರತಿನಿಧಿಗಳ ಅವಶ್ಯಕತೆಯಿದೆ. ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಇತರ ದೇಶಗಳಲ್ಲಿ ಸಾಲಪಡೆಯದೆಯೇ ಹಿಂದಿನವರು ಮಾಡಿದ್ದ ಸಾಲ ತೀರಿಸಿ, ಒತ್ತೆಯಿಟ್ಟಿರುವ ಬಂಗಾರ ವಾಪಾಸು ತಂದು ದೇಶವನ್ನು ರಕ್ಷಿಸಿದರು. ಅವರು ಕಾರ್ಯಕರ್ತರಿಗೆ ಮಾದರಿ ಆಗಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.