ADVERTISEMENT

ಬಿ.ಸಿ.ರೋಡ್: ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಸಿ ಎಂ ಭೇಟಿ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2017, 8:40 IST
Last Updated 24 ಅಕ್ಟೋಬರ್ 2017, 8:40 IST
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಸಮೀಪದ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭಾನುವಾರ ರಾತ್ರಿ ಭೇಟಿ ನೀಡಿದರು.
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಸಮೀಪದ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭಾನುವಾರ ರಾತ್ರಿ ಭೇಟಿ ನೀಡಿದರು.   

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡ್ ಸಮೀಪದ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭಾನುವಾರ ರಾತ್ರಿ ಭೇಟಿ ನೀಡಿ ವೀಕ್ಷಿಸಿದರು.

ಈ ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ.ಕೆ.ತುಕಾರಾಮ ಪೂಜಾರಿ ಅವರು ಇಲ್ಲಿನ ಐತಿಹಾಸಿಕ ಪರಿಕರ ಸಂಗ್ರಹ ಮತ್ತು ಹುಲಿ ಓಡಿಸುವ ಹಳೆ ಅನಾದಿ ಕಾಲದ ಸಾಮಾಗ್ರಿ ಬಗ್ಗೆ ವಿವರಿಸುತ್ತಿದ್ದಂತೆಯೇ ಅದರಿಂದ ಉಂಟಾಗುತ್ತಿದ್ದ ವಿಶಿಷ್ಟ ಶಬ್ದ ಆಲಿಸಿದರು.

ಇದೇ ವೇಳೆ ಇಲ್ಲಿ ಅಳವಡಿಸಿದ್ದ ಮಹಾತ್ಮಾ ಗಾಂಧೀಜಿ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾರ ಹಾಕಿ ನಮಸ್ಕರಿಸಿದರು. ಕೇಂದ್ರದ ಕಾರ್ಯದರ್ಶಿ ಡಾ. ಆಶಾಲತಾ ಸುವರ್ಣ ಅವರು ಇಲ್ಲಿನ ಗ್ರಂಥಾಲಯ, ಆರ್ಟ್ ಗ್ಯಾಲರಿ ಬಗ್ಗೆ ಮಾಹಿತಿ ನೀಡಿದರು.

ADVERTISEMENT

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಸಚಿವರಾದ ಡಿ. ಬಿ. ಜಯಚಂದ್ರ, ಯು.ಟಿ.ಖಾದರ್, ಶಾಸಕ ಕೆ. ಅಭಯಚಂದ್ರ ಜೈನ್, ಮುಖ್ಯ ಸಚೇತಕ ಐವನ್ ಡಿಸೋಜ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಪುರಸಭಾ ಸದಸ್ಯ ಪ್ರವೀಣ್ ಬಿ., ಎಸ್‍ವಿಎಸ್ ಪದವಿ ಕಾಲೇಜು ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್, ಪ್ರೊ.ಕೆ.ಪಿ. ಸೂಫಿ, ದಾಮೋದರ ಸಂಚಯಗಿರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.