ADVERTISEMENT

ಬ್ಯಾಂಕಿನ ಸೇವೆಗೆ ಬದ್ಧರಾಗಿ: ರಾಜೇಂದ್ರಕುಮಾರ್‌

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2017, 8:42 IST
Last Updated 29 ಅಕ್ಟೋಬರ್ 2017, 8:42 IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ. ಈ ಯಶಸ್ಸಿನ ಹಿಂದೆ ಬ್ಯಾಂಕಿನ ಆಡಳಿತ ವರ್ಗ, ಸಿಬ್ಬಂದಿ ವರ್ಗ ಹಾಗೂ ಮುಖ್ಯವಾಗಿ ಬ್ಯಾಂಕಿನ ಗ್ರಾಹಕರು ಕಾರಣರಾಗಿದ್ದಾರೆ ಎಂದು ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

ಅವರು ಶನಿವಾರ ನಗರದ ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ನಡೆದ 102 ಶಾಖೆಗಳ ಶಾಖಾ ವ್ಯವಸ್ಥಾಪಕರು ಹಾಗೂ ಬ್ಯಾಂಕಿನ ಸಿಬ್ಬಂದಿಗಳ ಸಭೆಯಲ್ಲಿ ಮಾತನಾಡಿದರು.
ಬ್ಯಾಂಕ್ ಹಲವು ಸಮಸ್ಯೆಗಳನ್ನು ಎದುರಿಸಿದಾಗಲೂ ನಮ್ಮೊಂದಿಗೆ ಸಹಕರಿಸಿ ಅಭಿವೃದ್ದಿಯ ಮುಂಚೂಣಿಗೆ ತರುವಲ್ಲಿ ಗ್ರಾಹಕರು ಹಾಗೂ ಸಿಬ್ಬಂದಿಯ ಪಾತ್ರ ಮಹತ್ತರವಾಗಿದೆ. ಬ್ಯಾಂಕಿನ ಸಿಬ್ಬಂದಿ ಉತ್ತಮ ಗುಣಮಟ್ಟದ ಸೇವೆಯನ್ನು ಸಲ್ಲಿಸುವ ಮೂಲಕ ಬ್ಯಾಂಕಿನ ಏಳ್ಗೆಗೆ ಬದ್ಧರಾಗಬೇಕು ಎಂದು ತಿಳಿಸಿದರು.

ಎಸ್‌ಸಿಡಿಸಿಸಿ ಬ್ಯಾಂಕ್ ಇಂದು ಸಮಗ್ರ ಅಭಿವೃದ್ಧಿಯೊಂದಿಗೆ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಈ ಯಶಸ್ಸು ಹೀಗೆಯೆ ಮುಂದುವರಿಯಬೇಕು. ಬ್ಯಾಂಕಿನ ಸಿಬ್ಬಂದಿಗಳಿಗೆ ಹೊಸ ವೇತನ ಶ್ರೇಣಿಯನ್ನು ಪರಿಷ್ಕರಿಸಲಾಗಿದೆ. ಅಲ್ಲದೆ ಪಿಂಚಣಿ ಯೋಜನೆಯು ಚಾಲ್ತಿಯಲ್ಲಿದೆ. ಬ್ಯಾಂಕಿನ ನೌಕರರ ಕ್ಷೇಮಾಭಿವೃದ್ಧಿಯನ್ನು ಬ್ಯಾಂಕಿನ ಆಡಳಿತ ವರ್ಗ ಬಯಸಿದೆ ಎಂದು ಹೇಳಿದರು.

ADVERTISEMENT

ಬ್ಯಾಂಕಿನ ನಿರ್ದೇಶಕರಾದ ಟಿ.ಜಿ.ರಾಜಾರಾಮ್ ಭಟ್, ಐಕಳ ಭಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿದರು. ಸಿಬ್ಬಂದಿ ಪರವಾಗಿ ಬ್ಯಾಂಕಿನ ಉಪ ಮಹಾಪ್ರಬಂಧಕ ಕೃಷ್ಣ ಬಿಲ್ಲವ ಮಾತನಾಡಿದರು. ಬ್ಯಾಂಕಿನ ನಿರ್ದೇಶಕರಾದ ಬಿ.ನಿರಂಜನ್, ಟಿ.ಜಿ.ರಾಜಾರಾಮ್ ಭಟ್, ಭಾಸ್ಕರ ಎಸ್. ಕೋಟ್ಯಾನ್, ಬಿ. ರಘುರಾಮ ಶೆಟ್ಟಿ, ಎಂ.ವಾದಿರಾಜ ಶೆಟ್ಟಿ, ಕೆ.ಎಸ್. ದೇವರಾಜ್, ಸದಾಶಿವ ಉಳ್ಳಾಲ್, ಶಶಿಕುಮಾರ್ ರೈ, ರಾಜೇಶ್ ರಾವ್, ಎಸ್.ಬಿ. ಜಯರಾಮ್ ರೈ, ದಕ್ಷಿಣ ಕನ್ನಡ ಸಹಕಾರ ಸಂಘಗಳ ಉಪನಿಂಬಂಧಕ ಬಿ.ಕೆ ಸಲೀಂ, ಮಹಾ ಪ್ರಬಂಧಕ ರವೀಂದ್ರ ಬಿ., ಸಲಹೆಗಾರ ಹಿಮವಂತ್ ಗೋಪಾಲ್‌ ಉಪಸ್ಥಿತರಿದ್ದರು. ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.