ADVERTISEMENT

ಮಕ್ಕಳ ಸಂಖ್ಯೆಗೆ ತಕ್ಕಂತೆ ಶೌಚಾಲಯಕ್ಕೆ ಕ್ರಮ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2012, 8:40 IST
Last Updated 2 ಮಾರ್ಚ್ 2012, 8:40 IST

ಕಾಸರಗೋಡು: ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುವ ಮಕ್ಕಳ ಸಂಖ್ಯೆ ಅನುಸರಿಸಿ ಶೌಚಾಲಯ ಸೌಲಭ್ಯ ಕಲ್ಪಿಸಬೇಕು ಎಂದು `ಝೀರೋ ವೇಸ್ಟ್~ ಯೋಜನೆಯ ಅಂಗವಾಗಿ ಸ್ಥಳೀಯಾಡಳಿತ ಸಂಸ್ಥೆಯ ಅಧ್ಯಕ್ಷರಿಗೆ ಕಾಸರಗೋಡು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ ವಿಚಾರಸಂಕಿರಣದಲ್ಲಿ ತಜ್ಞರು ಅಭಿಪ್ರಾಯಪಟ್ಟರು.

ಶಿಕ್ಷಣ ಸಂಸ್ಥೆಗಳಲ್ಲಿ 40 ಬಾಲಕರು ಮತ್ತು 20 ಬಾಲಕಿಯರಿಗೆ ತಲಾ ಒಂದೊಂದು ಮೂತ್ರಾಲಯಗಳು ಇರಬೇಕು. ಈ ಸೌಲಭ್ಯ ಒದಗಿಸದಿದ್ದರೆ ಆಯಾ ವಿದ್ಯಾಲಯಗಳ ಮುಖ್ಯ ಶಿಕ್ಷಕರು ಮತ್ತು ಪಂಚಾಯಿತಿ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಶಾಲೆಗಳಲ್ಲಿ ಶೌಚಾಲಯ ಮತ್ತು ಮೂತ್ರಾಲಯಗಳನ್ನು ನಿರ್ಮಿಸಲು ಘಟಕವೊಂದಕ್ಕೆ ರೂ. 55ಸಾವಿರ ಅಂದಾಜಿಸಲಾಗಿದೆ. ಇದರಲ್ಲಿ ಸಮಗ್ರ ಶುಚಿತ್ವ ಮಿಷನ್ ರೂ.35ಸಾವಿರ ಸಬ್ಸಿಡಿ ನೀಡಲಿದೆ. ರೂ.20ಸಾವಿರ ಸ್ಥಳೀಯಾಡಳಿತ ಸಂಸ್ಥೆಗಳು ಭರಿಸಬೇಕಾಗಿದೆ.

ವಿಚಾರಸಂಕಿರಣವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ.ಪಿ.ಶ್ಯಾಮಲಾದೇವಿ ಉದ್ಘಾಟಿಸಿದರು. ಆಲಪ್ಪುರ ಸಮಗ್ರ ಶುಚಿತ್ವ ಕಾರ್ಯಕ್ರಮದ ಸಹಾಯಕ ಸಂಯೋಜಕ ಆರ್.ವೇಣುಗೋಪಾಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಶುಚಿತ್ವ ಮಿಷನ್ ಜಿಲ್ಲಾ ಸಂಯೋಜಕ ಎಂ.ಖಾಲಿದ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.