ADVERTISEMENT

ಮಡೆ ಮಡೆಸ್ನಾನ: ಸೇವೆಗಾಗಿ ತುದಿಗಾಲಲ್ಲಿ ನಿಂತ ಭಕ್ತರು

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2012, 19:59 IST
Last Updated 17 ಡಿಸೆಂಬರ್ 2012, 19:59 IST

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಜಾತ್ರೋತ್ಸವದ ಸ್ಕಂದ ಪಂಚಮಿಯ ದಿನವಾದ ಸೋಮವಾರ 650ಕ್ಕೂ ಅಧಿಕ ಭಕ್ತರು ಮಡೆ ಮಡೆಸ್ನಾನ ಸೇವೆ ಸಲ್ಲಿಸಿದರು.

ಸೇವೆ ಸಲ್ಲಿಸಲು ಸರದಿಯಲ್ಲಿ ನಿಂತ ಭಕ್ತರು ಎರಡೂ ಕೈಯನ್ನು ಮೇಲಕ್ಕೆತ್ತಿ ಕೈಜೋಡಿಸಿ ಗಮನ ಸೆಳೆದರು.
ಮಧ್ಯಾಹ್ನದ ಮಹಾಪೂಜೆಯ ಬಳಿಕ, ದೇವಳದ ಹೊರಾಂಗಣದಲ್ಲಿ ಬ್ರಾಹ್ಮಣರ ಅನ್ನಪ್ರಸಾದ ಭೋಜನ ಸ್ವೀಕಾರದ ಬಳಿಕ ಭಕ್ತರು ಉಚ್ಚಿಷ್ಟದ ಮೇಲೆ ಮಡೆ ಮಡೆಸ್ನಾನ ಸೇವೆ ಸಲ್ಲಿಸಿದರು.

ಷಷ್ಠಿ ದಿನವಾದ ಮಂಗಳವಾರ ಮಧ್ಯಾಹ್ನ ಕೂಡ ಮಡೆ ಮಡೆಸ್ನಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.