ADVERTISEMENT

‘ಮುಗ್ಗರಿಸಿದ ಸ್ಟಾರ್ ಪ್ರಚಾರಕ ಯೋಗಿ’

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2018, 10:00 IST
Last Updated 16 ಮಾರ್ಚ್ 2018, 10:00 IST

ಪುತ್ತೂರು: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಿಜೆಪಿ ತನ್ನ ಸ್ಟಾರ್ ಪ್ರಚಾರಕ ಎಂದು ಬಿಂಬಿಸುತ್ತಾ ಬಂದಿದ್ದು, ರಾಜ್ಯದಲ್ಲೂ ಅವರನ್ನು ಬಳಸಿ ಕೊಂಡು ಮತ ಪಡೆಯಲು ನಿರ್ಧರಿಸಿತ್ತು. ಆದರೆ ಈಗ ಆದಿತ್ಯನಾಥ್ ಅವರು ಮುಗ್ಗರಿಸಿ ಬಿದ್ದಿದ್ದು, ಬಿಜೆಪಿ  ಏಳೋದು ಕಷ್ಟ’ ಎಂದು ಸಚಿವ ಬಿ. ರಮಾನಾಥ ರೈ ಅವರು ಲೇವಡಿ ಮಾಡಿದರು.

ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು ‘30 ವರ್ಷಗಳಿಂದ ಬಿಜೆಪಿಯನ್ನೇ ಗೆಲ್ಲಿಸುತ್ತಾ ಬಂದಿರುವ ಯೋಗಿ ಆದಿತ್ಯನಾಥ್ ಅವರು ಸತತವಾಗಿ ಸಂಸತ್ತಿಗೆ ಆಯ್ಕೆಯಾಗುತ್ತಾ ಬಂದಿದ್ದ ಉತ್ತರ ಪ್ರದೇಶದ ಗೋರಖ್‍ಪುರದಲ್ಲಿ ಈಗ ಬಿಜೆಪಿಗೆ ಹೀನಾಯ ಸೋಲಾಗಿದೆ’  ತನ್ನ ಕ್ಷೇತ್ರದಲ್ಲೇ ಬಿಜೆಪಿ ಅಭ್ಯರ್ಥಿ ಗೆಲ್ಲಿಸಲಾಗದ ಯೋಗಿ, ಇನ್ನು ಯಾವ ಶಕ್ತಿ ಇಟ್ಟುಕೊಂಡು ಕರ್ನಾ ಟಕದಲ್ಲಿ ಪ್ರಚಾರ ನಡೆಸಿಯಾರು ಎಂದು ಪ್ರಶ್ನಿಸಿದರು.

ಮಂಗಳೂರು ಮಹಾನಗರಪಾಲಿಕೆಯ ಸದಸ್ಯೆ ಪ್ರತಿಭಾ ಕುಳಾಯಿ ಅವರಿಗೆ ಪಕ್ಷ ಶೋಕಾಸ್ ನೋಟಿಸ್‌ ನೀಡಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ರೈ ಅವರು ‘ಇದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಇದರ ಬಗ್ಗೆ ನಾನು ಪಕ್ಷದ ವೇದಿಕೆಗಳಲ್ಲಿ ಮಾತನಾಡುತ್ತೇನೆಯೇ ಹೊರತು ಮಾಧ್ಯಮಗಳ ಮುಂದೆ ಏನೂ ಹೇಳಲಾರೆ’ಎಂದರು.

ADVERTISEMENT

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಶಾಸಕಿ ಶಕುಂತಳಾ ಟಿ. ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.