ADVERTISEMENT

ರಸ್ತೆ ತಡೆ ನಡೆಸಿ ಪ್ರತಿಭಟನೆ ಇಂದು

ಸಿಇಟಿ ಕಾಯ್ದೆಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2013, 9:01 IST
Last Updated 20 ಡಿಸೆಂಬರ್ 2013, 9:01 IST

ಮಂಗಳೂರು: 2006ರ ವೃತ್ತಿ ಶಿಕ್ಷಣ ಕಾಯ್ದೆ ಜಾರಿ ಮಾಡುವ ಸರ್ಕಾರದ ತೀರ್ಮಾನವನ್ನು ಖಂಡಿಸಿ ಇದೇ 20ರಂದು ರಾಜ್ಯದಾದ್ಯಂತ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಗುವುದು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ರಾಜ್ಯ ಕಾರ್ಯದರ್ಶಿ ರಮೇಶ್.ಕೆ ತಿಳಿಸಿದ್ದಾರೆ.

ಈ ಕಾಯ್ದೆ ಜಾರಿಯಿಂದ ಎಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಭಾರಿ  ತೊಂದರೆಯಾಗಲಿದೆ. ಬಡ, ಮಧ್ಯಮ ವರ್ಗದ ಅಷ್ಟೇ ಏಕೆ? ಪ್ರಾಮಾಣಿಕ ಐಎಎಸ್‌ ಅಧಿಕಾರಿಗಳ ಮಕ್ಕಳಿಗೂ ಖಾಸಗಿ ವೃತ್ತಿ ಶಿಕ್ಷಣ ಸಂಸ್ಥೆಗಳ ಶುಲ್ಕ ಭರಿಸಿ ಶಿಕ್ಷಣ ಪಡೆಯಲು ಸಾಧ್ಯವೇ ಇಲ್ಲದ ಮಾತಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಂದು 2006ರ ಕಾಯ್ದೆಯನ್ನು ಜಾರಿಗೊಳಿಸದೇ ಕೈಬಿಟ್ಟಿತ್ತು. ಈಗ ಅದೇ ಕಾಯ್ದೆಯನ್ನು ಜಾರಿಗೊಳಿಸಿ ವಿದ್ಯಾರ್ಥಿಗಳಿಗೆ ತೊಂದರೆಯನ್ನುಂಟು ಮಾಡಲು ಹೊರಟಿರುವ ಮತ್ತು ಖಾಸಗಿ ವೃತ್ತಿ ಶಿಕ್ಷಣ ಸಂಸ್ಥೆಗಳಿಗೆ ಲಾಭ ಮಾಡಿಕೊಡಲು ಹೊರಟಿರುವ ಈಗಿನ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿಯನ್ನು ಕೈಬಿಡಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸುವುದಾಗಿ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT