ADVERTISEMENT

ಹೈನುಗಾರಿಕೆಯಿಂದ ಆರ್ಥಿಕಾಭಿವೃದ್ಧಿ: ರವಿರಾಜ್ ಹೆಗ್ಡೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2012, 5:40 IST
Last Updated 5 ಡಿಸೆಂಬರ್ 2012, 5:40 IST

ಕೋಟ(ಬ್ರಹ್ಮಾವರ): ಕೃಷಿ ಮತ್ತು ಹೈನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಆರ್ಥಿಕ ಸ್ಥಿತಿಯನ್ನು ಬಲಪಡಿಸಿಕೊಳ್ಳಬಹುದು ಎಂದು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ರವಿರಾಜ್ ಹೆಗ್ಡೆ  ಹೇಳಿದರು.

ಸಾಲಿಗ್ರಾಮದ ಗಿರಿಜಾ ಕಲ್ಯಾಣ ಮಂಟಪ ಆವರಣದಲ್ಲಿ ಇತ್ತೀಚೆಗೆ ನಡೆದ ಆಧುನಿಕ ಹೈನುಗಾರಿಕೆ ಮಾಹಿತಿ ಶಿಬಿರ ಮತ್ತು ಪ್ರಾತ್ಯಕ್ಷಿಕೆ ಹಾಗೂ ಮಿಶ್ರತಳಿ ಕರುಗಳ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಾಲಿಗ್ರಾಮ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ತಾರನಾಥ ಹೊಳ್ಳ ಅಧ್ಯಕ್ಷತೆ ವಹಿಸಿದ್ದರು.
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ  ನಿರ್ದೆಶಕ ಎ.ಜಗದೀಶ ಕಾರಂತ, ಜಾನಕಿ ಹಂದೆ, ಮುಕುಂದ ನಾಯ್ಕ, ಡಾ.ಬಿ.ಸತ್ಯನಾರಾಯಣ, ಒಕ್ಕೂಟದ ವ್ಯವಸ್ಥಾಪಕ ಡಾ.ಜಿ.ಹೆಗಡೆ ಉಪಸ್ಥಿತರಿದ್ದರು.

ಸುಬ್ರಾಯ ಭಟ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ಶಿವಪ್ಪ ನಿರೂಪಿಸಿದರು. ದ.ಕ. ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು, ಸಾಲಿಗ್ರಾಮ  ಹಾಲು ಉತ್ಪಾದಕರ ಸಹಕಾರಿ ಸಂಘ, ಚೇಂಪಿ ಹಾಲು ಉತ್ಪಾದಕರ ಸಹಕಾರಿ ಸಂಘ, ಕಾರ್ಕಡ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ, ಹಂದಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ, ಕಾರ್ತಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ, ಕೋಟ ಹಾಲು ಉತ್ಪಾದಕರ ಸಹಕಾರಿ ಸಂಘ, ಮೂಡು ಗಿಳಿಯಾರು ಹಾಲು ಉತ್ಪಾದಕರ ಸಹಕಾರಿ ಸಂಘ,  ಮಣೂರು ಹಾಲು ಉತ್ಪಾದಕರ ಸಹಕಾರಿ ಸಂಘ, ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ಸಹಕಾರಿ ಸಂಘ, ಪಾರಂಪಳ್ಳಿ-ಪಡುಕರೆ ಮಹಿಳಾ ಸಹಕಾರಿ ಸಂಘ, ಕೋಡಿ ಕನ್ಯಾನ ಹಾಲು ಉತ್ಪಾದಕರ ಸಹಕಾರಿ ಸಂಘ ಕಾರ್ಯಕ್ರಮವನ್ನು ಆಯೋಜಿಸಿದ್ದವು.ಡಿ.6. ಕಾಸರಗೋಡಿನಲ್ಲಿ ವ್ಯಾಪಕ ಬಂದೋಬಸ್ತ್: ಎಸ್ ಪಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.