ADVERTISEMENT

‘ಸಂಸ್ಕೃತಿ ಅರಿಯಲು ಯುವಜನ ಮೇಳ ಸಹಕಾರಿ’

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2013, 4:25 IST
Last Updated 21 ಡಿಸೆಂಬರ್ 2013, 4:25 IST

ವಿಟ್ಲ: ನಾಡಿನ ವೈವಿಧ್ಯಮಯ ಸಂಸ್ಕೃತಿ, ಜನಪದೀಯ ವಿಚಾರಗಳು ಒಂದೇ ವೇದಿಕೆಯಡಿಯಲ್ಲಿ ಮೇಳೈಸಲು ಯುವಜನ ಮೇಳ ಅವಕಾಶ ನೀಡುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

ವಿಟ್ಲ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ರಾಜ್ಯ ಯುವಜನ ಮೇಳದ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.

ವಿಟ್ಲದಂತಹ ಸಣ್ಣ ಪ್ರದೇಶದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಇಲಾಖಾ­ಧಿಕಾರಿ, ಸಂಘ-ಸಂಸ್ಥೆ ಹಾಗೂ ಪ್ರತಿಯೊಬ್ಬರ ಸಹಕಾರ ಅವಶ್ಯಕ ಎಂದು ತಿಳಿಸಿದರು.

ಜಿ.ಪಂ. ಸದಸ್ಯರಾದ ಕೆ.ಟಿ.ಶೈಲಜಾ ಭಟ್, ಮಮತಾ ಗಟ್ಟಿ, ತಾ.ಪಂ.ಸದಸ್ಯ ಮಾಧವ ಮಾವೆ, ಕಾಂಗ್ರೆಸ್ ವಕ್ತಾರ ಹರಿಕೃಷ್ಣ ಬಂಟ್ವಾಳ್, ಬಂಟ್ವಾಳ ತಹಸೀಲ್ದಾರ್ ಮಲ್ಲೇಸ್ವಾಮಿ, ತಾಲೂಕು ಪಂಚಾ­ಯಿತಿ ಕಾರ್ಯ ನಿರ್ವಹಣಾಧಿಕಾರಿ ಅಶೋಕ್ ಜಿ.ತೋಟದ, ಜಿಲ್ಲಾ ಯುವಜನಾಧಿಕಾರಿ ಪಾಶ್ರ್ವ­ನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ, ವಿಟ್ಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವಾನಿ ರೈ ಕೊಲ್ಯ, ಉಪಾಧ್ಯಕ್ಷ ಅಬ್ದುಲ್ ಕಾದ್ರಿ, ಯುವಜನ ಮೇಳದ ಸಂಚಾಲಕ ಸುದರ್ಶನ್ ಪಡಿಯಾರ್ ಇತರರು ಇದ್ದರು.
ಜಿ.ಪಂ.ಸದಸ್ಯ ಎಂ.ಎಸ್ ಮಹಮ್ಮದ್ ಸ್ವಾಗತಿಸಿ­ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.