ಮೂಡುಬಿದಿರೆ: ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶೇ 100 ಫಲಿತಾಂಶ ಬಂದಿದೆ.
43 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಸತತ 8ನೇ ಬಾರಿಗೆ ಶಾಲೆಗೆ ಪೂರ್ಣ ಫಲಿತಾಂಶ ಬಂದಿದೆ. 25 ಮಂದಿ ವಿಶಿಷ್ಟ ಶ್ರೇಣಿ, 17 ಮಂದಿ ಪ್ರಥಮ, ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಲಕ್ಕವ್ವ (619) ಅಂಕ ಪಡೆದು ಶಾಲೆಗೆ ಪ್ರಥಮ, ಚೈತ್ರಾ ಪಾಟೀಲ್ (617) ದ್ವಿತೀಯ ಸ್ಥಾನ ಪಡೆದಿದ್ದಾರೆ.
ಸವಿತಾ ಡಿ.(606) ಗಳಿಸಿದ್ದಾರೆ. ಸಹನಾ ಎಂ., ರೂಪಾ, ಸವಿತಾ 600ಕ್ಕೂ ಹೆಚ್ಚು ಅಂಕ ಪಡೆದಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲ ಎಸ್.ಜಿ.ಹಿರೇಮಠ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.