ADVERTISEMENT

ಕಾಸರಗೋಡು: 153 ಮಂದಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2020, 16:04 IST
Last Updated 1 ಆಗಸ್ಟ್ 2020, 16:04 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   

ಮಂಗಳೂರು: ಕಾಸರಗೋಡು ಜಿಲ್ಲೆಯ 153 ಜನರಿಗೆ ಕೋವಿಡ್‌–19 ಸೋಂಕು ತಗುಲಿರುವುದು ಶನಿವಾರ ಲಭಿಸಿದ ವರದಿಗಳಿಂದ ದೃಢಪಟ್ಟಿದೆ.

‘ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 151 ಜನರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಇಬ್ಬರಿಗೆ ಬೇರೆ ಮೂಲಗಳಿಂದ ಸೋಂಕು ಹಬ್ಬಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,797ಕ್ಕೆ ತಲುಪಿದೆ’ ಎಂದು ಕಾಸರಗೋಡು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎ.ವಿ.ರಾಮದಾಸ್‌ ತಿಳಿಸಿದ್ದಾರೆ.

ಗುಣಮುಖರಾಗಿರುವ 28 ಮಂದಿ ಶನಿವಾರ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 1,075 ಮಂದಿ ಈವರೆಗೆ ಗುಣಮುಖರಾಗಿದ್ದಾರೆ.

ADVERTISEMENT

ಸಾವಿನ ಸಂಖ್ಯೆ 6ಕ್ಕೆ: ಕಾಸರಗೋಡು ಜಿಲ್ಲೆಯ ವ್ಯಕ್ತಿಯೊಬ್ಬರು ಶುಕ್ರವಾರ ಮೃತಪಟ್ಟಿದ್ದರು. ಮೃತದೇಹದಿಂದ ಗಂಟಲಿನ ದ್ರವದ ಮಾದರಿ ಸಂಗ್ರಹಿಸಲಾಗಿತ್ತು. ಅವರಿಗೆ ಕೋವಿಡ್‌ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದೆ. ಅಲ್ಲಿ ಸೋಂಕಿತರ ಸಾವಿನ ಸಂಖ್ಯೆ 6ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.