ADVERTISEMENT

ದ.ಕ: 1,830 ಸಕ್ರಿಯ ಪ್ರಕರಣ

137 ಮಂದಿಗೆ ಕೋವಿಡ್‌ ದೃಢ: 198 ಗುಣಮುಖ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2020, 4:15 IST
Last Updated 31 ಅಕ್ಟೋಬರ್ 2020, 4:15 IST

ಮಂಗಳೂರು: ದಿನದಿಂದ ದಿನಕ್ಕೆ ಗುಣಮುಖರ ಸಂಖ್ಯೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಶುಕ್ರವಾರ ಜಿಲ್ಲೆಯಲ್ಲಿ ಒಟ್ಟು 1,830 ಸಕ್ರಿಯ ಪ್ರಕರಣಗಳು ಉಳಿದಿವೆ. ಈ ಮಧ್ಯೆ 137 ಮಂದಿಗೆ ಕೋವಿಡ್–19 ದೃಢವಾಗಿದ್ದು, 198 ಮಂದಿ ಗುಣಮುಖರಾಗಿದ್ದಾರೆ.

ಮೃತಪಟ್ಟಿರುವ ಮೂವರಲ್ಲಿ ಕೋವಿಡ್–19 ಇರುವುದು ಶುಕ್ರವಾರ ದೃಢವಾಗಿದೆ. ಮೃತರ ಸಂಖ್ಯೆ 676 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ 2.58 ಲಕ್ಷ ಮಂದಿಯ ಗಂಟಲು ದ್ರವದ ಪರೀಕ್ಷೆ ನಡೆಸಲಾಗಿದ್ದು, 2.28 ಲಕ್ಷ ಮಂದಿಯ ವರದಿ ನೆಗೆಟಿವ್ ಬಂದಿದೆ. ಒಟ್ಟು 30,147 ಜನರಿಗೆ ಕೋವಿಡ್–19 ದೃಢವಾಗಿದ್ದು, 27,641 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

₹11.48 ಲಕ್ಷ ದಂಡ: ಜಿಲ್ಲೆಯಲ್ಲಿ ಕೋವಿಡ್–19 ಮಾರ್ಗಸೂಚಿ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟು10,330 ಪ್ರಕರಣಗಳನ್ನು ಪತ್ತೆ ಮಾಡಲಾಗಿದ್ದು, ಒಟ್ಟು ₹11,48,237 ದಂಡ ವಸೂಲಿ ಮಾಡಲಾಗಿದೆ.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ₹3,51,350, ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ ₹7,27,300, ಮಂಗಳೂರು ನಗರದಲ್ಲಿ ₹99,987, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ₹5,600 ದಂಡ ವಸೂಲಿ ಮಾಡಲಾಗಿದೆ.

ಕಾಸರಗೋಡಿನಲ್ಲಿ 133 ಪ್ರಕರಣ: ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 133 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 130 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ಒಟ್ಟು 148 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 18,484 ಮಂದಿಗೆ ಕೋವಿಡ್–19 ಖಚಿತವಾಗಿದ್ದು, 16,576 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.