ADVERTISEMENT

ಮೂಲ್ಕಿಯಲ್ಲಿ 19 ಸೆಂ.ಮೀ ಮಳೆ ದಾಖಲು!

​ಪ್ರಜಾವಾಣಿ ವಾರ್ತೆ
Published 26 ಮೇ 2024, 0:30 IST
Last Updated 26 ಮೇ 2024, 0:30 IST
ಮಳೆ
ಮಳೆ   

ಬೆಂಗಳೂರು: ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ 19, ಉಡುಪಿಯಲ್ಲಿ 13 ಸೆಂ.ಮೀನಷ್ಟು ಮಳೆಯಾಗಿದೆ.

ಇದೇ ಅವಧಿಯಲ್ಲಿ, ಕೊಡಗಿನ ಕುಶಾಲನಗರದಲ್ಲಿ 10, ಚಿಕ್ಕಮಗಳೂರಿನ ಕಳಸದಲ್ಲಿ 9, ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರಿನಲ್ಲಿ 8, ಉಡುಪಿಯ ಸಿದ್ದಾಪುರದಲ್ಲಿ 7 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಆರು ದಿನ ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ADVERTISEMENT

ಉತ್ತರ ಕನ್ನಡ, ಉಡುಪಿ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯಲ್ಲಿ ಭಾನುವಾರ ಮಳೆ ಆಗಲಿದೆ. ಗಾಳಿ ವೇಗವು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಇಲಾಖೆ ಸೂಚಿಸಿದೆ.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.