ವಂಚನೆ
ಉಜಿರೆ: ಇಲ್ಲಿನ ಮಂಜುಶ್ರೀ ನಗರದಲ್ಲಿ ವಾಸವಾಗಿರುವ ಕೊಯ್ಯೂರು ಗ್ರಾಮದ ಮಲೆಬೆಟ್ಟು ನಿವಾಸಿ ಅಮೃತೇಶ್ ಕುಮಾರ್ ಎಂಬುವರಿಗೆ ಉದ್ಯೋಗದ ಆಮಿಷ ತೋರಿಸಿ, ಅಪರಿಚಿತ ವ್ಯಕ್ತಿಯೊಬ್ಬರು ಅವರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ₹19.90 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ಜಾನ್ವಿ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬರು ಉದ್ಯೋಗ ಆಮಿಷ ತೋರಿಸಿ, ಅಮೃತೇಶ್ ಕುಮಾರ್ ಅವರ ಮೊಬೈಲ್‌ಗೆ ಉದ್ಯೋಗಕ್ಕಾಗಿ ನೋಂದಣಿ ಮಾಡಿಕೊಳ್ಳುವಂತೆ ಲಿಂಕ್ ಕಳುಹಿಸಿದ್ದರು. ಆ ಲಿಂಕ್ ತೆರೆದು ನೋಂದಾಯಿಸಿದ ನಂತರ, ತಮ್ಮ ಬ್ಯಾಂಕ್ ಖಾತೆಯಿಂದ, ಅಪರಿಚಿತ ವ್ಯಕ್ತಿ ಹಣ ವರ್ಗಾಯಿಸಿಕೊಂಡಿದ್ದಾರೆ ಎಂದು ಆರೋಪಿಸಿ, ಅಮೃತೇಶ್ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.