ADVERTISEMENT

ಮಂಗಳೂರು: ಒಂದೇ ದಿನ 19,533 ಜನರಿಗೆ ಲಸಿಕೆ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2021, 5:18 IST
Last Updated 23 ಅಕ್ಟೋಬರ್ 2021, 5:18 IST

ಮಂಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲಸಿಕೆ ಅಭಿಯಾನದಲ್ಲಿ ಒಟ್ಟು 19,533 ಜನರಿಗೆ ಲಸಿಕೆ ನೀಡಲಾಗಿದೆ. ಅವರಲ್ಲಿ 2,392 ಜನರು ಮೊದಲ ಡೋಸ್, 17,141 ಜನರು ಎರಡನೇ ಡೋಸ್ ಪಡೆದವರಾಗಿದ್ದಾರೆ.

ಬಂಟ್ವಾಳ ತಾಲ್ಲೂಕಿನಲ್ಲಿ 4,541, ಬೆಳ್ತಂಗಡಿ 2,931, ಮಂಗಳೂರು 9,560, ಪುತ್ತೂರು 1,637 ಹಾಗೂ ಸುಳ್ಯ 864 ಜನರಿಗೆ ಲಸಿಕೆ ನೀಡಲಾಗಿದೆ. ಈವರೆಗೆ ಜಿಲ್ಲೆಯಲ್ಲಿ 15,07,136 ಜನರು ಮೊದಲ ಡೋಸ್ ಪಡೆದಿದ್ದಾರೆ. 8,05,349 ಜನರು ಎರಡನೇ ಡೋಸ್ ಪೂರ್ಣಗೊಳಿಸಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT