ADVERTISEMENT

ಮೂಡುಬಿದಿರೆ ಪತ್ರಿಕಾ ಭವನಕ್ಕೆ ₹ 25 ಲಕ್ಷ ಅನುದಾನ: ಶಾಸಕ ಉಮಾನಾಥ

​ಪ್ರಜಾವಾಣಿ ವಾರ್ತೆ
Published 3 ಜುಲೈ 2025, 6:03 IST
Last Updated 3 ಜುಲೈ 2025, 6:03 IST
ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಮಂಗಳವಾರ ನಡೆದ ಮಾಧ್ಯಮ ಹಬ್ಬ ಕಾರ್ಯಕ್ರಮದಲ್ಲಿ ಸುದ್ದಿ ವಾಹಿನಿ ವಾಚಕ ವಾಸುದೇವ ಭಟ್ ಮಾರ್ನಾಡು ಅವರಿಗೆ ಪ್ರೆಸ್‌ಕ್ಲಬ್ ಗೌರವ ನೀಡಿ ಸನ್ಮಾನಿಸಲಾಯಿತು. ಶಾಸಕ ಉಮಾನಾಥ ಕೋಟ್ಯಾನ್ ಮತ್ತಿತರರು ಇದ್ದರು 
ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಮಂಗಳವಾರ ನಡೆದ ಮಾಧ್ಯಮ ಹಬ್ಬ ಕಾರ್ಯಕ್ರಮದಲ್ಲಿ ಸುದ್ದಿ ವಾಹಿನಿ ವಾಚಕ ವಾಸುದೇವ ಭಟ್ ಮಾರ್ನಾಡು ಅವರಿಗೆ ಪ್ರೆಸ್‌ಕ್ಲಬ್ ಗೌರವ ನೀಡಿ ಸನ್ಮಾನಿಸಲಾಯಿತು. ಶಾಸಕ ಉಮಾನಾಥ ಕೋಟ್ಯಾನ್ ಮತ್ತಿತರರು ಇದ್ದರು    

ಮೂಡುಬಿದಿರೆ: ಸಮಾಜದಲ್ಲಿ ಅಂಕುಡೊಂಕುಗಳನ್ನು ತಿದ್ದಿ, ಉತ್ತಮ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದು. ಮೂಡುಬಿದಿರೆ ಪತ್ರಕರ್ತರದ ಸಂಘದ ನೂತನ ಪತ್ರಿಕಾ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಶೀಘ್ರ ₹ 25 ಲಕ್ಷ  ಅನುದಾನ ಮಂಜೂರು ಮಾಡಿಸಲಾಗುವುದು ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್ ಹೇಳಿದರು.

ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ನಡೆದ ಮಾಧ್ಯಮ ಹಬ್ಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಮಾತನಾಡಿ, ತಪ್ಪಿಗೆ ಕ್ಷಮೆ ಇದೆ. ಮೋಸಕ್ಕೆ ಕ್ಷಮೆ ಇಲ್ಲ. ಜನರ ಮನಸ್ಥಿತಿಯನ್ನು ಒಳ್ಳೆಯ ವಿಚಾರಕ್ಕೆ ಬದಲಾಯಿಸಲು ಪತ್ರಿಕೆಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಹೇಳಿದರು.

ADVERTISEMENT

ಸಂಘದ ಅಧ್ಯಕ್ಷ ಬೆಳುವಾಯಿ ಸೀತಾರಾಮ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ವಾಲ್ಟರ್ ನಂದಳಿಕೆ, ಭವಿಷ್ಯದಲ್ಲಿ ಮಾಧ್ಯಮಗಳಿಗಿರುವ ಸವಾಲುಗಳು ವಿಷಯದ ಕುರಿತು ಉಪನ್ಯಾಸ ನೀಡಿದರು.

ಕನ್ನಡ ಸುದ್ದಿವಾಹಿನಿಯ ಸುದ್ದಿ ನಿರೂಪಕ ವಾಸುದೇವ ಭಟ್ ಮಾರ್ನಡು ಅವರಿಗೆ ಪ್ರೆಸ್ ಕ್ಲಬ್ ಗೌರವ ನೀಡಿ ಸನ್ಮಾನಿಸಲಾಯಿತು.

ಎಸ್ಎಸ್ಎಲ್‌ಸಿ ಸಾಧಕರಾದ ರುಚಿರಾ ಕುಂದರ್, ಸುಶಾಂತ್ ದರೆಗುಡ್ಡೆ, ಸಿಂಚನಾ ಮೂಡುಮಾರ್ನಡು ಅವರನ್ನು ಗೌರವಿಸಲಾಯಿತು.

ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಪಾಲ್ಗೊಂಡಿದ್ದರು. ಅಶ್ರಫ್ ವಾಲ್ಪಾಡಿ ನಿರೂಪಿಸಿದರು. ಪ್ರಸನ್ನ ಹೆಗ್ಡೆ, ಜೈಸನ್ ತಾಕೊಡೆ, ನವೀನ್ ಸಾಲ್ಯಾನ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.