ADVERTISEMENT

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ₹ 32.96 ಲಕ್ಷ ಮೌಲ್ಯದ ಚಿನ್ನ ವಶ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2020, 5:10 IST
Last Updated 28 ಅಕ್ಟೋಬರ್ 2020, 5:10 IST
ವಶಪಡಿಸಿಕೊಂಡಿರುವ ಚಿನ್ನ
ವಶಪಡಿಸಿಕೊಂಡಿರುವ ಚಿನ್ನ   

ಮಂಗಳೂರು: ದುಬೈನಿಂದ ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕ ಅಕ್ರಮ ಸಾಗಾಟಕ್ಕೆ ಯತ್ನಿಸಿದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ಅಬೂಬಕರ್ ಸಿದ್ದೀಕ್ ಬಂಧಿತ ಎಂದು ತಿಳಿದುಬಂದಿದೆ.

ಈತ ದುಬೈನಿಂದ ಸ್ಪೈಸ್‌ಜೆಟ್ ವಿಮಾನದ ಮೂಲಕ ಮಂಗಳೂರಿಗೆ ಬಂದಿಳಿದಿದ್ದಾನೆ. ತಪಾಸಣೆ ನಡೆಸುವ ವೇಳೆ 24 ಕ್ಯಾರೆಟ್‌ನ 634 ಗ್ರಾಂ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ ₹32,96,800 ರೂ. ಎಂದು ಅಂದಾಜಿಸಲಾಗಿದೆ.

ADVERTISEMENT

ಆರೋಪಿಯು ಪೌಡರ್ ರೂಪದ ಚಿನ್ನವನ್ನು ದೇಹಕ್ಕೆ ಅಂಟಿಸಿಕೊಂಡು ಅಕ್ರಮ ಸಾಗಾಟಕ್ಕೆ‌ ಮುಂದಾಗಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.