ADVERTISEMENT

ದಕ್ಷಿಣ ಕನ್ನಡ: 376 ಜನರಿಗೆ ಕೋವಿಡ್ ದೃಢ

268 ಮಂದಿ ಗುಣಮುಖ; ಮೃತ ಇಬ್ಬರಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2020, 2:55 IST
Last Updated 10 ಅಕ್ಟೋಬರ್ 2020, 2:55 IST

ಮಂಗಳೂರು: ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ 376 ಮಂದಿಗೆ ಕೋವಿಡ್–19 ದೃಢವಾಗಿದ್ದು, 268 ಜನರು ಗುಣಮುಖರಾಗಿದ್ದಾರೆ. ಮೃತಪಟ್ಟಿರುವ ಇಬ್ಬರಲ್ಲಿ ಕೋವಿಡ್–19 ಇರುವುದು ಶುಕ್ರವಾರ ಪತ್ತೆಯಾಗಿದೆ.

ಇದುವರೆಗೆ ಒಟ್ಟು 1,88,689 ಮಂದಿಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, 1,62,741 ಮಂದಿಯ ವರದಿ ನೆಗೆಟಿವ್‌ ಬಂದಿದೆ. 25,948 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, ಇದುವರೆಗೆ 20,854 ಮಂದಿ ಗುಣಮುಖರಾಗಿದ್ದಾರೆ. ಸದ್ಯ 4,498 ಸಕ್ರಿಯ ಪ್ರಕರಣಗಳಿದ್ದು, ಮೃತರ ಸಂಖ್ಯೆ 596ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

₹7.4 ಲಕ್ಷ ದಂಡ: ಜಿಲ್ಲೆಯಲ್ಲಿ ಮಾಸ್ಕ್‌ ಉಲ್ಲಂಘನೆಯ 5,963 ಪ್ರಕರಣಗಳನ್ನು ಪತ್ತೆ ಮಾಡಲಾಗಿದ್ದು, ಒಟ್ಟು ₹7,45,335 ದಂಡ ವಸೂಲಿ ಮಾಡಲಾಗಿದೆ.

ADVERTISEMENT

ಕಾಸರಗೋಡು– 366 ಮಂದಿಗೆ ಸೋಂಕು: ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 366 ಜನರಿಗೆ ಕೋವಿಡ್–19 ದೃಢವಾಗಿದ್ದು, ಈ ಪೈಕಿ 363 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ಇಬ್ಬರು ಬೇರೆ ರಾಜ್ಯಗಳಿಂದ ಬಂದಿದ್ದು, ಒಬ್ಬರು ವಿದೇಶದಿಂದ ಬಂದವರಲ್ಲೂ ಸೋಂಕು ದೃಢವಾಗಿದೆ. ಈ ಮಧ್ಯೆ 468 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ. ರಾಮದಾಸ್‌ ತಿಳಿಸಿದ್ದಾರೆ.

ಕಾಸರಗೋಡು:16ರವರೆಗೆ ನಿಷೇಧಾಜ್ಞೆ

ಕಾಸರಗೋಡು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಇದೇ 16ರ ವರೆಗೆ ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಆದೇಶ ಹೊರಡಿಸಿದ್ದಾರೆ.

ಕಾಸರಗೋಡು, ವಿದ್ಯಾನಗರ, ಮಂಜೇಶ್ವರ, ಕುಂಬಳೆ, ಬದಿಯಡ್ಕ, ಮೆಲ್ಪರಂಬ್, ಬೇಕಲ್, ಹೊಸದುರ್ಗ, ನೀಲೇಶ್ವರಂ, ಚಂದೇರಾ ಪೊಲೀಸ್ ಠಾಣೆ ವ್ಯಾಪ್ತಿ, ಪರಪ್ಪ, ಒಡಯಂಚಾಲ್ ಮತ್ತು ಪನತ್ತಡಿ ಪೇಟೆ ವ್ಯಾಪ್ತಿಯಲ್ಲಿ ಇದೇ 16ರ ರಾತ್ರಿ 12 ಗಂಟೆಯವರೆಗೆ 144 ಕಲಂ ಪ್ರಕಾರ ನಿಷೇಧಾಜ್ಞೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.