ADVERTISEMENT

46 ಮಂದಿಗೆ ಕೋವಿಡ್: 92 ಗುಣಮುಖ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2020, 4:35 IST
Last Updated 22 ನವೆಂಬರ್ 2020, 4:35 IST

ಮಂಗಳೂರು: ಜಿಲ್ಲೆಯಲ್ಲಿ ಶನಿವಾರ 46 ಮಂದಿಗೆ ಕೋವಿಡ್–19 ದೃಢವಾಗಿದ್ದು, ದುಪ್ಪಟ್ಟು ಜನರು ಗುಣಮುಖರಾಗಿದ್ದಾರೆ. ಒಟ್ಟು 92 ಜನರು ಚೇತರಿಸಿಕೊಂಡಿದ್ದು, ಮೃತಪಟ್ಟ ಮೂವರಲ್ಲಿ ಕೋವಿಡ್ ಇರುವುದು ಪತ್ತೆಯಾಗಿದೆ.

ಇದುವರೆಗೆ 3.30 ಲಕ್ಷ ಮಂದಿಯ ಗಂಟಲು ದ್ರವ ಪರೀಕ್ಷಿಸಿದ್ದು, 2.98 ಲಕ್ಷ ವರದಿಗಳು ನೆಗೆಟಿವ್ ಬಂದಿವೆ. ಒಟ್ಟು 31,250 ಜನರಿಗೆ ಕೋವಿಡ್‌ ದೃಢವಾಗಿದ್ದು, 30,234 ಮಂದಿ ಗುಣಮುಖರಾಗಿದ್ದಾರೆ. ಸದ್ಯ 582 ಸಕ್ರಿಯ ಪ್ರಕರಣಗಳಿದ್ದು, ಮೃತರ ಸಂಖ್ಯೆ 704ಕ್ಕೆ ಏರಿದೆ.

ಮಾಸ್ಕ್‌ ನಿಯಮ ಉಲ್ಲಂಘನೆಯ 13,714 ಪ್ರಕರಣಗಳನ್ನು ಪತ್ತೆ ಮಾಡಲಾಗಿದ್ದು, ₹14.83 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ADVERTISEMENT

ಕಾಸರಗೋಡಿನಲ್ಲಿ 104 ಪ್ರಕರಣ: ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 104 ಮಂದಿಗೆ ಕೋವಿಡ್–19 ದೃಢಪಟ್ಟಿದೆ. 96 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದ್ದು, 168 ಮಂದಿ ಗುಣಮುಖರಾಗಿದ್ದಾರೆ. ಸದ್ಯ 1,073 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.