ADVERTISEMENT

ಹಿಜಾಬ್‌| ನಿರ್ಬಂಧ ಎದುರಿಸಿದ್ದ 46 ವಿದ್ಯಾರ್ಥಿನಿಯರು ಸಮವಸ್ತ್ರ ಧರಿಸಿ ಕಾಲೇಜಿಗೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2022, 2:22 IST
Last Updated 9 ಜೂನ್ 2022, 2:22 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಉಪ್ಪಿನಂಗಡಿ: ಹಿಜಾಬ್ ವಿಚಾರವಾಗಿ ವಾರಗಳ ಹಿಂದೆ ತರಗತಿ ಪ್ರವೇಶಕ್ಕೆ ನಿರ್ಬಂಧಕ್ಕೆ ಒಳಗಾಗಿದ್ದ ಆರು ವಿದ್ಯಾರ್ಥಿನಿಯರು ಬುಧವಾರ ಕಾಲೇಜಿನ ಸಮವಸ್ತ್ರ ನಿಯಮಾಳಿಯನ್ನು ಉಲ್ಲಂಘಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದು ಕೊಟ್ಟಿದ್ದಾರೆ. ಕಾಲೇಜು ಸಮವಸ್ತ್ರದ ನಿಯಮ ಪಾಲಿಸಿದ ಕಾರಣ ಇವರ ಮೇಲಿನ ನಿರ್ಬಂಧವನ್ನು ಹಿಂಪಡೆದು, ತರಗತಿ ಪ್ರವೇಶಕ್ಕೆ ಅನುವು ಮಾಡಿಕೊಡಲಾಗಿದೆ.

ಮೊದಲ ಹಂತದಲ್ಲಿ ಅಮಾನತು ಆಗಿದ್ದ ಆರು ಮಂದಿ ಮತ್ತು ಹಿಜಾಬ್ ಪ್ರತಿಭಟನೆಯಿಂದ ದೂರ ಸರಿದ 29 ಮಂದಿ ಹಾಗೂ ಕಾಲೇಜಿಗೂ ಬರದೆ, ಪ್ರತಿಭಟನೆಯಲ್ಲೂ ಪಾಲ್ಗೊಳ್ಳದೆ ಅಂತರ ಕಾಯ್ದುಕೊಂಡಿದ್ದ 11 ಮಂದಿ ವಿದ್ಯಾರ್ಥಿನಿಯರು ಸೇರಿ ಒಟ್ಟು 46 ವಿದ್ಯಾರ್ಥಿನಿಯರು ಬುಧವಾರ ಸಮವಸ್ತ್ರ ಧರಿಸಿ, ತರಗತಿಗೆ ಹಾಜರಾಗಿದ್ದಾರೆ.

ಅಮಾನತು ಆಗಿರುವ 24 ವಿದ್ಯಾರ್ಥಿನಿಯರು ಕಾಲೇಜಿಗೆ ಬಂದಿಲ್ಲ. ಕಾಲೇಜಿನಲ್ಲಿ ಒಟ್ಟು 101 ಮುಸ್ಲಿಂ ವಿದ್ಯಾರ್ಥಿನಿಯರು ಇದ್ದು, ಈ ಪೈಕಿ 46 ವಿದ್ಯಾರ್ಥಿನಿಯರು ತರಗತಿಗೆ ಹಾಜರಾದಂತಾಗಿದೆ. ಉಳಿದ ವಿದ್ಯಾರ್ಥಿನಿಯರು ಗುರುವಾರದಿಂದ ಕಾಲೇಜಿಗೆ ಬರಬಹುದೆಂಬ ನಿರೀಕ್ಷೆಯಲ್ಲಿ ಉಪನ್ಯಾಸಕರು ಇದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.