ADVERTISEMENT

5ರಿಂದ ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2013, 5:55 IST
Last Updated 4 ಡಿಸೆಂಬರ್ 2013, 5:55 IST

ಮಂಗಳೂರು: ರಾಜ್ಯ ಸರ್ಕಾರ ಬಿಸಿಯೂಟ ನೌಕರರಿಗೆ ತಿಂಗಳಿಗೆ 3 ಸಾವಿರ ರೂಪಾಯಿ ವೇತನ ನೀಡಬೇಕು ಹಾಗೂ ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಬಿಸಿಯೂಟ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಡಿ. 5ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಆರಂಭಿಸಲಿದ್ದಾರೆ.

ರಾಜ್ಯ ಬಿಸಿಯೂಟ ನೌಕರರ ಸಂಘದ (ಸಿಐಟಿಯು) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷರಾದ ಪದ್ಮಾವತಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಗಿರಿಜ ಮೂಡುಬಿದರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ.5ರಂದು ರಾಜ್ಯದಾದ್ಯಂತ ಬಿಸಿಯೂಟ ನೌಕರರು ಮುಷ್ಕರ ನಡೆಸಲು ಕರೆ ನೀಡಿದ್ದು ಅಂದು ಶಾಲೆಯಲ್ಲಿ ಬಿಸಿಯೂಟ ತಯಾರಿಸುವುದಿಲ್ಲ. ದಕ್ಷಿಣ ಕನ್ನಡದಲ್ಲಿ ಎಲ್ಲ ಕಾರ್ಮಿಕರು ಕೊಟ್ಟಾರದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಬೆಳಿಗ್ಗೆ 10 ಗಂಟೆಯಿಂದ ಧರಣಿ ಆರಂಭಿಸಲಿದ್ದಾರೆ.

ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯದ ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆಯೂ ಧರಣಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.