ADVERTISEMENT

ಕೇರಳ, ಮಹಾರಾಷ್ಟ್ರದಿಂದ ನೆಗೆಟಿವ್ ವರದಿ ಇಲ್ಲದೆ ಬಂದ 51 ಮಂದಿ ಕ್ವಾರಂಟೈನ್

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2021, 15:37 IST
Last Updated 3 ಆಗಸ್ಟ್ 2021, 15:37 IST
ತಲಪಾಡಿ ಗಡಿಗೆ ಮಂಗಳವಾರ ಭೇಟಿ ನೀಡಿ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ, ನೆಗೆಟಿವ್ ವರದಿ ಇಲ್ಲದೇ ಗಡಿ ಪ್ರವೇಶಕ್ಕೆ ಅನುಮತಿ ನೀಡಬೇಡಿ ಎಂದು ಸೂಚಿಸಿದರು.
ತಲಪಾಡಿ ಗಡಿಗೆ ಮಂಗಳವಾರ ಭೇಟಿ ನೀಡಿ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ, ನೆಗೆಟಿವ್ ವರದಿ ಇಲ್ಲದೇ ಗಡಿ ಪ್ರವೇಶಕ್ಕೆ ಅನುಮತಿ ನೀಡಬೇಡಿ ಎಂದು ಸೂಚಿಸಿದರು.   

ಮಂಗಳೂರು:ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದೆ ಕೇರಳ ಹಾಗೂ ಮಹಾರಾಷ್ಟ್ರದಿಂದ ಮಂಗಳೂರು ರೈಲು ನಿಲ್ದಾಣಕ್ಕೆ ಬಂದ 51 ಪ್ರಯಾಣಿಕರನ್ನು ಪುರಭವನದಲ್ಲಿ ತಾತ್ಕಾಲಿಕ ಕ್ವಾರಂಟೈನ್ ಇರಿಸಲಾಗಿದೆ ಎಂದು ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಪ್ರಯಾಣಿಕರ ಗಂಟಲು ದ್ರವ ಪರೀಕ್ಷೆ‌ ನಡೆಸಲಾಗಿದ್ದು, ನೆಗೆಟಿವ್ ಬರುವ ಪ್ರಯಾಣಿಕರಿಗೆ ಜಿಲ್ಲೆಗೆ ಪ್ರವೇಶಿಸಲು ಅವಕಾಶ ನೀಡಲಾಗುವುದು.‌ ಪಾಸಿಟಿವ್ ಬಂದ ಪ್ರಯಾಣಿಕರನ್ನು ಕೋವಿಡ್ ಕೇರ್ ಸೆಂಟರ್‌ಗಳಿಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.

ರೈಲು ನಿಲ್ದಾಣಗಳಲ್ಲಿ ತಪಾಸಣೆ ಮುಂದುವರಿಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.