ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 631 ಸಕ್ರಿಯ ಪ್ರಕರಣ

36 ಮಂದಿಗೆ ಕೋವಿಡ್: 69 ಜನ ಗುಣಮುಖ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2020, 2:52 IST
Last Updated 21 ನವೆಂಬರ್ 2020, 2:52 IST

ಮಂಗಳೂರು: ಜಿಲ್ಲೆಯಲ್ಲಿ ಶುಕ್ರವಾರ 36 ಜನರಿಗೆ ಕೋವಿಡ್–19 ದೃಢವಾಗಿದ್ದು, 69 ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟ ಒಬ್ಬರಿಗೆ ಕೋವಿಡ್ ಇರುವುದು ಶುಕ್ರವಾರ ಪತ್ತೆಯಾಗಿದೆ.

ಇದುವರೆಗೆ ಒಟ್ಟು 3.22 ಲಕ್ಷ ಮಂದಿಯ ಗಂಟಲು ದ್ರವ ಪರೀಕ್ಷಿಸಿದ್ದು, 2.91 ಲಕ್ಷ ಜನರ ವರದಿ ನೆಗೆಟಿವ್‌ ಬಂದಿದೆ. ಒಟ್ಟು 31,474 ಜನರಿಗೆ ಕೋವಿಡ್ ದೃಢವಾಗಿದೆ. ಈ ಪೈಕಿ 30,142 ಜನರು ಗುಣಮುಖರಾಗಿದ್ದಾರೆ. ಸದ್ಯ 631 ಸಕ್ರಿಯ ಪ್ರಕರಣಗಳಿದ್ದು, ಮೃತರ ಸಂಖ್ಯೆ 701 ಕ್ಕೆ ಏರಿದೆ.

ಮಾಸ್ಕ್‌ ನಿಯಮ ಉಲ್ಲಂಘನೆಯ 13,602 ಪ್ರಕರಣ ಪತ್ತೆಯಾಗಿದ್ದು, ಒಟ್ಟು ₹14.70 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ADVERTISEMENT

ಕಾಸರಗೋಡಿನಲ್ಲಿ 138 ಪ್ರಕರಣ

ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 138 ಮಂದಿಗೆ ಕೋವಿಡ್–19 ದೃಢಪಟ್ಟಿದೆ. 144 ಮಂದಿ ಗುಣಮುಖರಾಗಿದ್ದಾರೆ.

ಈವರೆಗೆ ಒಟ್ಟು 20,954 ಮಂದಿಗೆ ಸೋಂಕು ದೃಢಪಟ್ಟಿದ್ದು, 19,597 ಮಂದಿ ಗುಣಮುಖರಾಗಿದ್ದಾರೆ. ಮೃತರ ಸಂಖ್ಯೆ 219 ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.