ADVERTISEMENT

ಪರೋಪಕಾರ ಗುಣ, ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ

ಬಸದಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2022, 4:02 IST
Last Updated 22 ಸೆಪ್ಟೆಂಬರ್ 2022, 4:02 IST
ಹೊಂಬುಜ ಜೈನಮಠದ ದೇವೇಂದ್ರಕೀರ್ತಿ ಸ್ವಾಮೀಜಿ ವಿದ್ಯಾರ್ಥಿ ಪ್ರೋತ್ಸಾಹಧನ ವಿತರಿಸಿ ಮಂಗಲ ಪ್ರವಚನ ನೀಡಿದರು.
ಹೊಂಬುಜ ಜೈನಮಠದ ದೇವೇಂದ್ರಕೀರ್ತಿ ಸ್ವಾಮೀಜಿ ವಿದ್ಯಾರ್ಥಿ ಪ್ರೋತ್ಸಾಹಧನ ವಿತರಿಸಿ ಮಂಗಲ ಪ್ರವಚನ ನೀಡಿದರು.   

ಉಜಿರೆ: ‘ವಿದ್ಯಾರ್ಥಿಗಳು ಪರೋಪಕಾರ ಗುಣ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಹೊಂಬುಜ ಜೈನಮಠದ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.

ಬೆಳ್ತಂಗಡಿ ಜೈನ ಪೇಟೆಯಲ್ಲಿರುವ ರತ್ನತ್ರಯ ಜೈನತೀರ್ಥ ಕ್ಷೇತ್ರದಲ್ಲಿ ಬುಧವಾರ ಕೆಲ್ಲಗುತ್ತು ಸಬ್ರಬೈಲು ಕಿನ್ಯಮ್ಮ ಯಾನೆ ಗುಣವತಿ ಅಮ್ಮನವರ 33ನೆ ಪುಣ್ಯತಿಥಿ ಆಚರಣೆ ಸಂದರ್ಭ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 721 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಪ್ರೋತ್ಸಾಹಧನ ವಿತರಿಸಿ ಅವರು ಮಂಗಲ ಪ್ರವಚನ ನೀಡಿದರು.

ವಿದ್ಯಾರ್ಥಿ ವೇತನ ನೀಡುವ ಸಲುವಾಗಿ ರಾಹುಲ್‌ವರ್ಮ ಬಳ್ಳಾಲ್ ಸ್ಮರನಾರ್ಥ ₹50 ಲಕ್ಷ ನಿಧಿ ಸ್ಥಾಪಿಸಲಾಯಿತು. ಬಸದಿಯ ಕಚೇರಿಯ ವ್ಯವಸ್ಥಾಪಕ ಕೆ. ಧನಂಜಯ ಅಜ್ರಿ ಅವರಿಗೆ ವೈದ್ಯಕೀಯ ಶುಶ್ರೂಷೆಗೆ ₹50 ಸಾವಿರ ನೀಡಲಾಯಿತು.

ADVERTISEMENT

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ವಿಜಯಲಕ್ಷಿ ಪಿ.ಎನ್. ಆರಿಗಾ, ಡಾ. ಕೆ. ಜೀವಂಧರ ಬಳ್ಳಾಲ್, ಕೆ. ರಾಜವರ್ಮ ಬಳ್ಳಾಲ್, ಡಾ. ಪ್ರಿಯಾ ಬಳ್ಳಾಲ್‌, ವಿನಯಾ ಜೆ. ಬಳ್ಳಾಲ್, ಎಂ. ಜಿನರಾಜ ಶೆಟ್ಟಿ, ಕೃಷ್ಣರಾಜ ಹೆಗ್ಡೆ ಮೂಡುಬಿದಿರೆ, ಎನ್. ಪ್ರೇಮ್ ಕುಮಾರ್ ಹೊಸ್ಮಾರು, ದಿಲೀಪ್ ಕುಮಾರ್ ಬಳ್ಳಾಲ್ ಮತ್ತು ಪ್ರಸನ್ನ ಕುಮಾರ್ ಬೆಳ್ತಂಗಡಿ, ಅನುವಂಶೀಯ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್, ಶಿಕ್ಷಕ ಧರಣೇಂದ್ರ ಕುಮಾರ್ ಜೈನ್ ಇದ್ದರು.

ಬಸದಿಯಲ್ಲಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ 108 ಕಲಶ ಅಭಿಷೇಕ, ನವಕಲಶಾಭಿಷೇಕ, ಮಹಾಪೂಜೆ ಮತ್ತು ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರಿಗೆ ಅಲಂಕಾರ ಪೂಜೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.