ADVERTISEMENT

ಲಾಕ್‌ಡೌನ್: 840 ವಾಹನ ಮುಟ್ಟುಗೋಲು

​ಪ್ರಜಾವಾಣಿ ವಾರ್ತೆ
Published 24 ಮೇ 2021, 7:12 IST
Last Updated 24 ಮೇ 2021, 7:12 IST

ಮಂಗಳೂರು: ರಾಜ್ಯ ಸರ್ಕಾರ ಜೂನ್‌ 7ರವರೆಗೆ ವಿಸ್ತರಿಸಿರುವ ಲಾಕ್‌ಡೌನ್‌ ನಿಯಮಗಳನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಎಸ್ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.

ಲಾಕ್‌ಡೌನ್‌ ಉಲ್ಲಂಘನೆಯ 76 ಪ್ರಕರಣಗಳು ದಾಖಲಿಸಲಾಗಿದೆ. ಶನಿವಾರದವರೆಗೆ ಒಟ್ಟು 7,636 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. 840 ವಾಹನಗಳನ್ನು ಮುಟ್ಟುಗೋಲು ಹಾಕಲಾಗಿದೆ. ಸಾರ್ವಜನಿಕರು ಮಾಸ್ಕ್ ಧರಿಸುವ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು. ಅಗತ್ಯ ಸಂದರ್ಭ ಹೊರತುಪಡಿಸಿ ಮನೆಯಿಂದ ಹೊರಬರದೆ, ಸರ್ಕಾರದ ನಿಯಮ ಪಾಲಿಸಬೇಕು ಎಂದು ಅವರು ವಿನಂತಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT