ಶಾಲೆ
ಪುತ್ತೂರು: ತಾಲ್ಲೂಕಿನ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹84.7 ಲಕ್ಷ ಅನುದಾನ ಬಿಡುಗಡೆ ಮಾಡಿದೆ.
ಕುಂಬ್ರ ಕೆಪಿಎಸ್‌ನಲ್ಲಿ 800 ವಿದ್ಯಾರ್ಥಿಗಳಿದ್ದಾರೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳ ಕೊರತೆ ಇದೆ. ಇದಕ್ಕಾಗಿ ಅನುದಾನ ಬಿಡುಗಡೆ ಮಾಡುವಂತೆ ನಾವು ಶಾಸಕ ಅಶೋಕ್ಕುಮಾರ್ ರೈ ಅವರ ಮೂಲಕ ಮನವಿ ಮಾಡಿದ್ದೆವು. ಈಗ ಬಿಡುಗಡೆಯಾಗಿರುವ ಅನುದಾನದಲ್ಲಿ ಕಟ್ಟಡ ನಿರ್ಮಿಸುವ ಮೂಲಕ ಕೊಠಡಿ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಕುಂಬ್ರ ಕೆಪಿಎಸ್ ಕಾರ್ಯಾಧ್ಯಕ್ಷ ರಕ್ಷಿತ್ ರೈ ಮುಗೇರು ತಿಳಿಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲೂ ಖಾಸಗಿ ಶಾಲೆಗಳಲ್ಲಿ ಇರುವ ಸೌಲಭ್ಯ, ಶೈಕ್ಷಣಿಕ ಗುಣಮಟ್ಟ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಶಾಸಕ ಅಶೋಕ್ಕುಮಾರ್ ರೈ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.