ADVERTISEMENT

ಮಂಗಳೂರು: 300 ಮಂದಿಯಿಂದ ಯೋಗ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 21 ಜೂನ್ 2022, 4:30 IST
Last Updated 21 ಜೂನ್ 2022, 4:30 IST
   

ಮಂಗಳೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಅಯುಷ್ ಇಲಾಖೆ ಹಾಗೂ ನೆಹರೂ ಯುವ ಕೇಂದ್ರದ ವತಿಯಿಂದ ಹಾಗೂ ವಿವಿಧ ಯೋಗ ಸಂಘಟನೆಗಳ ಸಹಕಾರದೊಂದಿಗೆ ನಗರದ ನಗರದ ಕುದ್ಮಲ್ ರಂಗರಾವ್ ಪುರಭವನದ ಬಳಿಯ ಪಾಲಿಕೆ ಸಭಾಂಗಣದಲ್ಲಿ ಮಂಗಳವಾರ 300ಕ್ಕೂ ಅಧಿಕ ಮಂದಿ ಯೋಗ ಪ್ರದರ್ಶನ ಮಾಡಿದರು.

ಶಾಸಕರಾದ ವೇದವ್ಯಾಸ ಕಾಮತ್ ಅವರು ಕಾರ್ಯಜ್ರಮಕ್ಕೆಚಾಲನೆ ನೀಡಿದರು.

ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಅಲೆಮಾರಿ/ಅರೆ ಅಲೆಮಾರಿ‌ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ,ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾಆಯುಷ್ ಅಧಿಕಾರಿ ಡಾ.ಮಹಮ್ಮದ್ ಇಕ್ಬಾಲ್, ನೆಹರೂ ಯುವ ಕೇಂದ್ರದ ರಘುವೀರ್ ಸೂಟರ್ ಪೇಟೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಪ್ರದೀಪ್ ಡಿಸೋಜಾ ಹಾಗೂ ಇತರೆ ಗಣ್ಯರು ಯೋಗ ಪ್ರದರ್ಶನದಲ್ಲಿ ಭಾಗವಹಿಸಿದರು.

ADVERTISEMENT

ಯೋಗ ಗುರುಗಳಾದ ಗೋಪಾಲ ಕೃಷ್ಣ ದೇಲಂಪಾಡಿ ಅವರು ಯೋಗಾಸನದ ವಿವಿಧ ಭಂಗಿಗಳನ್ನು ವಿವರಿಸುತ್ತಾ ಯೋಗಾಭ್ಯಾಸ ಮಾಡಿಸಿದರು.

ಆಯುಷ್ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸೇರಿದಂತೆ ಹಲವು ಯೋಗ ಸಂಘಟನೆಗಳ ಯುವಕ-ಯುವತಿಯರು, ಯೋಗ ಪ್ರಿಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ಕೃಷ್ಣಮಠದ ರಾಜಾಂಗಣದಲ್ಲಿ ಯೋಗ

ಉಡುಪಿ: ಕೃಷ್ಣಮಠದ ರಾಜಾಂಗಣದಲ್ಲಿ ಮಂಗಳವಾರ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ ಯೋಗದಿನ ಉದ್ಘಾಟಿಸಿದರು.
ಜಿಲ್ಲಾಧಿಕಾರಿ ಕೂರ್ಮಾರಾವ್, ಜಿಲ್ಲಾ ಪಂಚಾಯಿತಿ ಸಿಇಒ ಎಚ್.ಪ್ರಸನ್ನ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು.
ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯೋಗದ ಮಹತ್ವ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.