ADVERTISEMENT

ಅಕ್ರಮ ಸಾಗಣೆ: 9,250 ಕೆಜಿ ಅಕ್ಕಿ ವಶ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 16:55 IST
Last Updated 21 ಸೆಪ್ಟೆಂಬರ್ 2020, 16:55 IST

ಪುತ್ತೂರು: ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಲಾರಿಯಲ್ಲಿ ಸಾಗಣೆ ಮಾಡುತ್ತಿದ್ದ ಪ್ರಕರಣ ಪತ್ತೆ ಮಾಡಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಲಾರಿ ಚಾಲಕ, ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದ ಕಾವಿನಮೂಲೆ ನಿವಾಸಿ ಖಲಂದರ್ ಮತ್ತು ಕಡಬ ತಾಲ್ಲೂಕಿನ ಸವಣೂರು ಗ್ರಾಮದ ಮಾಂತೂರು ನಿವಾಸಿ ಝಕಾರಿಯಾ ಬಂಧಿತ ಆರೋಪಿಗಳು. ತಾಲ್ಲೂಕಿನ ಕಬಕ ಗ್ರಾಮದ ಪೋಳ್ಯದಲ್ಲಿ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಭಾನುವಾರ ವಾಹನ ತಪಾಸಣೆ ನಡೆಸುತ್ತಿದ್ದ ಪುತ್ತೂರು ನಗರ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಜಂಬೂರಾಜ್ ಮಹಾಜನ್ ಮತ್ತು ಸಿಬ್ಬಂದಿ, ಪುತ್ತೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಲಾರಿಯನ್ನು ತಡೆದು ತಪಾಸಣೆಗೊಳಿಸಿದ ವೇಳೆ ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಅಕ್ಕಿ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ.

₹2 ಲಕ್ಷ ಮೌಲ್ಯದ 9,250 ಕೆಜಿ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. ಆಹಾರ ನಿರೀಕ್ಷಕಿ ಸರಸ್ವತಿ ಅವರು ನೀಡಿರುವ ದೂರಿನಂತೆ ಆರೋಪಿಗಳ ವಿರುದ್ದ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.