ADVERTISEMENT

ದ.ಕ: ಎರಡಂಕಿಗೆ ಇಳಿದ ಕೋವಿಡ್‌

95 ಜನರಿಗೆ ಸೋಂಕು: 171 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2020, 15:55 IST
Last Updated 31 ಅಕ್ಟೋಬರ್ 2020, 15:55 IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 95 ಮಂದಿಗೆ ಕೋವಿಡ್–19 ದೃಢವಾಗಿದ್ದು, 171 ಜನರು ಗುಣಮುಖರಾಗಿದ್ದಾರೆ. ಮೃತಪಟ್ಟಿರುವ ಒಬ್ಬರಲ್ಲಿ ಕೋವಿಡ್ ಇರುವುದು ಶನಿವಾರ ಖಚಿತವಾಗಿದೆ.

ಇದುವರೆಗೆ ಜಿಲ್ಲೆಯಲ್ಲಿ 2,61,002 ಮಂದಿಯ ಗಂಟಲು ದ್ರವ ಪರೀಕ್ಷಿಸಿದ್ದು, 2,30,760 ಮಾದರಿಗಳ ವರದಿ ನೆಗೆಟಿವ್‌ ಬಂದಿದೆ. ಒಟ್ಟು 30,242 ಜನರಿಗೆ ಕೋವಿಡ್–19 ದೃಢವಾಗಿದ್ದು, 27,812 ಮಂದಿ ಗುಣಮುಖರಾಗಿದ್ದಾರೆ. ಸದ್ಯ 1,753 ಸಕ್ರಿಯ ಪ್ರಕರಣಗಳಿದ್ದು, ಮೃತರ ಸಂಖ್ಯೆ 677ಕ್ಕೆ ಏರಿದೆ.

ದಂಡ:ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 10,486 ಮಾಸ್ಕ್‌ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಮಾಡಲಾಗಿದ್ದು, ₹11,62,237 ದಂಡ ವಸೂಲಿ ಮಾಡಲಾಗಿದೆ.

ADVERTISEMENT

ಕಾಸರಗೋಡಿನಲ್ಲಿ ನ.15ರವರೆಗೆ ನಿಷೇಧಾಜ್ಞೆ:ಕಾಸರಗೋಡು ಜಿಲ್ಲೆಯಲ್ಲಿ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ನವೆಂಬರ್ 15 ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಡಿ. ಸಜಿತ್ ಬಾಬು ಆದೇಶ ಹೊರಡಿಸಿದ್ದಾರೆ.

ಸೋಂಕಿತರ ಸಂಖ್ಯೆ ಇಳಿಮುಖ ಆಗದೇ ಇರುವುದರಿಂದ ಮಂಜೇಶ್ವರ, ಕುಂಬಳೆ, ಬದಿಯಡ್ಕ, ಕಾಸರಗೋಡು, ವಿದ್ಯಾನಗರ, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ, ಚಂದೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಪ್ಪ, ಒಡೆಯಂಚಾಲ್, ಪನತ್ತಡಿ ಪೇಟೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ.

ಕಾಸರಗೋಡು ಜಿಲ್ಲೆಯಲ್ಲಿ ಇದುವರೆಗೆ 18,640 ಮಂದಿಗೆ ಸೋಂಕು ದೃಢಪಟ್ಟಿದ್ದು, 16,738 ಮಂದಿ ಗುಣಮುಖರಾಗಿದ್ದಾರೆ. 1,713 ಸಕ್ರಿಯ ಪ್ರಕರಣಗಳಿದ್ದು, 189ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.