ADVERTISEMENT

ಅಕ್ರಮ ಮದ್ಯ ಮಾರಾಟಕ್ಕೆ ಅಡಿವಾಣ ಅಗತ್ಯ: ರಮಾನಾಥ ರೈ

ಮೋಂತಿಮಾರು: 1,937ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2025, 4:52 IST
Last Updated 17 ಜೂನ್ 2025, 4:52 IST
ಬಂಟ್ವಾಳ ತಾಲ್ಲೂಕಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಮೋತಿಮಾರು ಮದ್ಯವರ್ಜನ ವ್ಯವಸ್ಥಾಪನಾ ಸಮಿತಿ ವತಿಯಿಂದ ಭಾನುವಾರ ನಡೆದ  ಮದ್ಯವರ್ಜನ ಶಿಬಿರಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು
ಬಂಟ್ವಾಳ ತಾಲ್ಲೂಕಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಮೋತಿಮಾರು ಮದ್ಯವರ್ಜನ ವ್ಯವಸ್ಥಾಪನಾ ಸಮಿತಿ ವತಿಯಿಂದ ಭಾನುವಾರ ನಡೆದ  ಮದ್ಯವರ್ಜನ ಶಿಬಿರಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು   

ಬಂಟ್ವಾಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮದ್ಯವರ್ಜನ ಶಿಬಿರದ ಮೂಲಕ ಮದ್ಯವ್ಯಸನಿಗಳ ಮನ ಪರಿವರ್ತಿಸಿ ದುಶ್ಚಟಮುಕ್ತ ಸಮಾಜ ನಿರ್ಮಿಸಲು ಶ್ರಮಿಸುತ್ತಿದ್ದು, ಗ್ರಾಮೀಣ ಪ್ರದೇಶಗಳ ಗೂಡಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಡೆಯುವ ಅಗತ್ಯವಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಇಲ್ಲಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಮೋತಿಮಾರು ಮದ್ಯವರ್ಜನ ವ್ಯವಸ್ಥಾಪನಾ ಸಮಿತಿ ವತಿಯಿಂದ ಭಾನುವಾರ ನಡೆದ 1,937ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮೋಂತಿಮಾರು ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೋಕ್ತೇಸರ ಎಸ್.ಆರ್.ಸತೀಶ್ಚಂದ್ರ ಶಿಬಿರ ಉದ್ಘಾಟಿಸಿ ಮಾತನಾಡಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಮಪ್ರಸಾದ್ ರೈ ತಿರುವಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯೋಜನೆಯ ಜಿಲ್ಲಾ ನಿರ್ದೇಶಕ ಎ.ಬಾಬು ನಾಯ್ಕ, ವಿಟ್ಲ ಲಯನ್ಸ್ ಕ್ಕಬ್ ನಿಯೋಜಿತ ಅಧ್ಯಕ್ಷ ಸಂಜೀವ ಪೂಜಾರಿ, ಕಣಂತೂರು ತೋಡಕುಕ್ಕಿನಾರ್ ದೈವಸ್ಥಾನದ ಅನುವಂಶಿಕ ಆಡಳಿತ ಮೋಕ್ತೇಸರ ದೇವಿಪ್ರಸಾದ್ ಪೊಯ್ಯತ್ತಾಯ, ಪ್ರಗತಿ ಬಂಧು ಸ್ವಸಹಾಯ ಸಂಘದ ಕೇಂದ್ರ ಒಕ್ಕೂಟದ ಅಧ್ಯಕ್ಷ ನವೀನ್ ಚಂದ್ರ ಕಣಂತೂರು, ಮಂಚಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಲಕ್ಷ್ಮಣ ಎಂ.ಎಂ.ಹಾಜರಿದ್ದರು.

ADVERTISEMENT

ಉಡುಪಿ ಜನಜಾಗೃತಿ ವೇದಿಕೆ ಪ್ರಾದೇಶಿಕ ಕಚೇರಿ ನಿರ್ದೇಶಕ ಗಣೇಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಟ್ಲ ವಲಯ ಯೋಜನಾಧಿಕಾರಿ ಸುರೇಶ್ ಗೌಡ ಸ್ವಾಗತಿಸಿದರು. ಮೇಲ್ವಿಚಾರಕಿ ಸವಿತಾ ವಂದಿಸಿದರು. ಗಣೇಶ್ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.