ADVERTISEMENT

ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಪತಿ ತಪ್ಪಿಗೆ ಪತ್ನಿಯ ಸದಸ್ಯತ್ವಕ್ಕೆ ಕೋಕ್‌

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2021, 21:25 IST
Last Updated 28 ಏಪ್ರಿಲ್ 2021, 21:25 IST
ಅಕಾಡೆಮಿ ಆದೇಶ ಪತ್ರ
ಅಕಾಡೆಮಿ ಆದೇಶ ಪತ್ರ   

ಮುಡಿಪು (ದಕ್ಷಿಣ ಕನ್ನಡ): ಫೇಸ್‌ಬುಕ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ ಲುಕ್ಮಾನ್ ಅಡ್ಯಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಅಲ್ಪಸಂಖ್ಯಾತ ವಿಭಾಗ ಮುಖಂಡ ಫಝಲ್ ಅಸೈಗೋಳಿ ಕೊಣಾಜೆ ಠಾಣೆಗೆ ದೂರು
ನೀಡಿದ್ದಾರೆ.

ಕೊರೊನಾದಿಂದ ಸತ್ತವರ ಶವದ ಪೋಟೊ ಹಾಕಿರುವ ಲುಕ್ಮಾನ್‌ ಅಡ್ಯಾರ್‌, ‘ದೇಶದಲ್ಲಿ ಜನರು ಈ ರೀತಿ ಸಾಯಲು ಕಾರಣರಾದ ದೇಶದ ಪ್ರಧಾನಿಯೂ ಬೀದಿ ಬದಿಯಲ್ಲಿ ನರಕಯಾತನೆ ಅನುಭವಿಸಿ ಸಾಯುವಂತಾಗಲು ಎಲ್ಲ ಪ್ರಾರ್ಥಿಸಬೇಕು’ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಮಧ್ಯೆ ಲುಕ್ಮಾನ್ ಅಡ್ಯಾರ್ ಅವರ ಪತ್ನಿ ನಫೀಸ ಮಿಸ್ರಿಯಾ ಅವರ ಸದಸ್ಯತ್ವವನ್ನು ರದ್ದು ಮಾಡಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್‌ ಪೂರ್ಣಿಮಾ ಆದೇಶಿಸಿದ್ದಾರೆ.

ADVERTISEMENT

'ದೇಶದ ಪ್ರಧಾನಿಯವರ ಬಗ್ಗೆ ಅತ್ಯಂತ ಕಠೋರವಾದ ಹಾಗೂ ಕಾನೂನಿಗೆ ವಿರುದ್ಧವಾದ ಪೋಸ್ಟ್‌ಗಳನ್ನು ನಿಮ್ಮ ಪತಿ ಹಾಕಿದ್ದಾರೆ. ದೇಶದ ಪ್ರಧಾನಿಯ ಸಾವನ್ನು ಬಯಸುವವರ ಹೆಂಡತಿಯು ನಮ್ಮ ಅಕಾಡೆಮಿ ಸದಸ್ಯರಾಗಿ ಸಮಿತಿಯಲ್ಲಿ ಮುಂದುವರಿಯುವುದು ಸರಿಯಲ್ಲ ಹಾಗೂ ತಮ್ಮನ್ನು ತಕ್ಷಣವೇ ಅಕಾಡೆಮಿ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ’ ಎಂದು ಅಧ್ಯಕ್ಷರ ಅನುಮತಿ ಮೇರೆಗೆ ರಿಜಿಸ್ಟ್ರಾರ್ ಆದೇಶ ಹೊರಡಿಸಿದ್ದಾರೆ. ಈ ಪತ್ರವೂ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.