ADVERTISEMENT

ಮೂಡುಬಿದಿರೆಯಲ್ಲಿ ‘ಅಮ್ಮನ ಹೆಸರಿನಲ್ಲಿ ಒಂದು ಗಿಡ’ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 6 ಜೂನ್ 2025, 15:12 IST
Last Updated 6 ಜೂನ್ 2025, 15:12 IST
<div class="paragraphs"><p>ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮೂಡುಬಿದಿರೆ ಪುರಸಭೆ ವ್ಯಾಪ್ತಿಯಲ್ಲಿ ಅಮ್ಮನ ಹೆಸರಿನಲ್ಲಿ ಒಂದು ಗಿಡ ಕಾರ್ಯಕ್ರಮವನ್ನು ಪುರಸಭೆ ಅಧ್ಯಕ್ಷೆ ಜಯಶ್ರೀ ಕೇಶವ್ ಉದ್ಘಾಟಿಸಿದರು</p></div>

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮೂಡುಬಿದಿರೆ ಪುರಸಭೆ ವ್ಯಾಪ್ತಿಯಲ್ಲಿ ಅಮ್ಮನ ಹೆಸರಿನಲ್ಲಿ ಒಂದು ಗಿಡ ಕಾರ್ಯಕ್ರಮವನ್ನು ಪುರಸಭೆ ಅಧ್ಯಕ್ಷೆ ಜಯಶ್ರೀ ಕೇಶವ್ ಉದ್ಘಾಟಿಸಿದರು

   

ಮೂಡುಬಿದಿರೆ: ಪೌರಾಡಳಿತ ನಿರ್ದೇಶನಾಲಯ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಮೂಡುಬಿದಿರೆ ಪುರಸಭೆ ವ್ಯಾಪ್ತಿಯಲ್ಲಿ ‘ಡೇ ನಲ್ಮ್’ ಅಡಿಯಲ್ಲಿ ರಚನೆಗೊಂಡಿರುವ ಮಹಿಳಾ ಸ್ವ-ಸಹಾಯ ಗುಂಪುಗಳಲ್ಲಿರುವ ಸದಸ್ಯೆಯರ ಮೂಲಕ ‘ಅಮ್ಮನ ಹೆಸರಿನಲ್ಲಿ ಒಂದು ಗಿಡ’ ನೆಡುವ ಕಾರ್ಯಕ್ರಮವನ್ನು ಮೂಡುಬಿದಿರೆ ಪುರಸಭೆಯ ಅಧ್ಯಕ್ಷೆ ಜಯಶ್ರೀ ಕೇಶವ್ ಉದ್ಘಾಟಿಸಿದರು.

ಉಪಾಧ್ಯಕ್ಷ ನಾಗರಾಜ್ ಪೂಜಾರಿ ಅವರು ಪುರಸಭೆ ವ್ಯಾಪ್ತಿಯ ಸಮುದಾಯ ಭವನ, ಜ್ಯೋತಿನಗರ ಉದ್ಯಾನ, ನೀರಿನ ಶುದ್ಧೀಕರಣ ಘಟಕದಲ್ಲಿ ಗಿಡ ನೆಟ್ಟರು.

ADVERTISEMENT

ಪುರಸಭೆ ಮುಖ್ಯಾಧಿಕಾರಿ ಇಂದು ಎಂ., ಪರಿಸರ ಎಂಜಿನಿಯರ್ ಶಿಲ್ಪಾ ಎಸ್., ಕಂದಾಯ ಅಧಿಕಾರಿ ಜ್ಯೋತಿ ಎಚ್., ಹಿರಿಯ ಆರೋಗ್ಯ ನಿರೀಕ್ಷಕಿ ಶಶಿರೇಖಾ, ಸಮುದಾಯ ಸಂಘಟಕ ಪ್ರಸನ್ನಕುಮಾರ್, ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ ಫೌಝೀಯ ಬೇಗಂ, ಪೂರ್ಣಿಮಾ, ಸ್ವ- ಸಹಾಯ ಸಂಘದ ಸದಸ್ಯರು, ಪೌರಕಾರ್ಮಿಕರು ಭಾಗವಹಿಸಿದ್ದರು,

ಸಮುದಾಯ ಆರೋಗ್ಯ ಕೇಂದ್ರ, ಜೆಎಂಎಫ್‌ಸಿ ನ್ಯಾಯಾಲಯಗಳನ್ನು ಸ್ವಚ್ಛ ಕಟ್ಟಡಗಳೆಂದು ಘೋಷಿಸಿ ಪ್ರಶಸ್ತಿ ಪತ್ರ ವಿತರಿಸಲಾಯಿತು. ಸ್ವಚ್ಛ ಭಾರತ ಹಸಿರು ಭಾರತದ ಬಗ್ಗೆ ಪ್ರತಿಜ್ಞೆ ಸ್ವೀಕರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.