ADVERTISEMENT

ಕುಟ್ರುಪಾಡಿ: ಧ್ವಜಾರೋಹಣದ ವೇಳೆ ಕುಸಿದು ಬಿದ್ದ ನಿವೃತ್ತ ಸೈನಿಕ ಸಾವು

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2022, 7:39 IST
Last Updated 15 ಆಗಸ್ಟ್ 2022, 7:39 IST
ಗಂಗಾಧರ ಗೌಡ
ಗಂಗಾಧರ ಗೌಡ   

ಕಡಬ (ದಕ್ಷಿಣ ಕನ್ನಡ): ಕುಟ್ರುಪಾಡಿ ಗ್ರಾಮ ಪಂಚಾಯಿತಿ ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಅಸ್ವಸ್ಥಗೊಂಡು, ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.

ಹೊಸಮಠ ಸಿ.ಎ.ಬ್ಯಾಂಕಿನ ಮಾಜಿಅಧ್ಯಕ್ಷ ಎನ್. ಕರುಣಾಕರ ಗೋಗಟೆ ಧ್ವಜಾರೋಹಣಕ್ಕೆ ಸಿದ್ದತೆ ಮಾಡುತ್ತಿದ್ದಾಗ ಅವರಿಗೆ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ಧ್ವಜ ವಂದನೆಯ ಮಾಹಿತಿ ನೀಡುತ್ತಿದ್ದರು. ಈ ವೇಳೆ ಗಂಗಾಧರ ಗೌಡ ಕುಸಿದು ಬಿದ್ದು ಅಸ್ವಸ್ಥಗೊಂಡಾಗ, ತಕ್ಷಣ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಅವರು ಮೃತಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT