ಮೂಡುಬಿದಿರೆ: ಬೆಳುವಾಯಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಚೆಗೆ ನಡೆದಿದ್ದ ಕಾರು ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ನಿವಾಸಿ ಸಂದೀಪ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದಾರೆ.
ಆ.16ರಂದು ಸಂದೀಪ್ ಹಾಗೂ ಆತನ ಮೂವರು ಸ್ನೇಹಿತರು ಕಾರಿನಲ್ಲಿ ಮೂಡುಬಿದಿರೆಯಿಂದ ಕಾರ್ಕಳಕ್ಕೆ ಹೋಗುವಾಗ ಬೆಳುವಾಯಿಯಲ್ಲಿ ಕಾರು ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ವೇಣೂರು ಪೆರ್ಮಡೆ ನಿವಾಸಿ ಸುಮಿತ್ ಸ್ಥಳದಲ್ಲೇ ಮೃತಪಟ್ಟಿದ್ದರು. ಅವರೊಂದಿಗೆ ಇದ್ದ ಸಂದೀಪ್ ಸಹಿತ ಇತರರು ಗಾಯಗೊಂಡಿದ್ದರು. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.