ಉಳ್ಳಾಲ ತಾಲ್ಲೂಕಿನ ಕುತ್ತಾರು ಮದನಿನಗರ ಮಸೀದಿಯಲ್ಲಿ ಅಬ್ದುಲ್ ರಹೀಂ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಕೆ ವೇಳೆ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಜನರು
ಉಳ್ಳಾಲ (ದಕ್ಷಿಣ ಕನ್ನಡ): ಬಂಟ್ವಾಳ ಗ್ರಾಮಾಂತರ ಠಾಣೆಯ ವ್ಯಾಪ್ತಿಯ ಇರಾ ಕೋಡಿಯಲ್ಲಿ ಮಂಗಳವಾರ ಹತ್ಯೆಗೊಳಗಾದ ಅಬ್ದುಲ್ ರಹೀಂ ಅವರ ಪಾರ್ಥಿವ ಶರೀರವನ್ನು ಅವರ ಊರಾದ ಬಂಟ್ವಾಳ ತಾಲ್ಲೂಕಿನ ಕೊಳತ್ತಮಜಲುವಿಗೆ ಬುಧವಾರ ಬೆಳಿಗ್ಗೆ ಮೆರವಣಿಗೆಯಲ್ಲಿ ಸಾಗಿಸಲಾಯಿತು.
ಇದಕ್ಕೂ ಮುನ್ನ ಕುತ್ತಾರು ಮದನಿನಗರ ಮಸೀದಿಯಲ್ಲಿ ಪಾರ್ಥಿವ ಶರೀರವನ್ನು ಇಟ್ಟು ಪ್ರಾರ್ಥನೆ ಸಲ್ಲಿಸಲಾಯಿತು. ಮಸೀದಿ ಬಳಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು. ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ನೇತೃತ್ವದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಬೇರೆ ಜಿಲ್ಲೆಗಳ ಹೆಚ್ಚುವರಿ ಪೊಲೀಸರು ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ಪಾರ್ಥಿವ ಶರೀರವು ತೊಕ್ಕೊಟ್ಟು, ನಂತೂರು, ಪೊಳಲಿ ಮಾರ್ಗವಾಗಿ ಕೆಲವೇ ಹೊತ್ತಿನಲ್ಲಿ ಅಡ್ಡೂರು ಸಮೀಪದ ಕೊಳತ್ತಮಜಲು ಗ್ರಾಮದಲ್ಲಿನ ಮನೆಗೆ ತಲುಪಲಿದೆ. ಅಲ್ಲಿನ ಮಸೀದಿಯಲ್ಲಿ ರಹೀಂ ಮೃತದೇಹದ ಅಂತಿಮ ಕ್ರಿಯೆಗಳು ನಡೆಯಲಿವೆ ಎಂದು ಮುಸ್ಲಿಂ ಸಮುದಾಯದ ಮುಖಂಡರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.