ಉಜಿರೆ: ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಹೊನ್ನಾವರದ ಶ್ರೀಧರ ವೆಂಕಟಕೃಷ್ಣ ಉಪಾಧ್ಯಾಯ ಬಂಧಿತ ಆರೋಪಿ.
ಈತನ ವಿರುದ್ಧ 2015ರಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ಹತ್ತು ವರ್ಷಗಳಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಶುಕ್ರವಾರ ಮಂಗಳೂರಿನಲ್ಲಿ ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.