ಮಂಗಳೂರು: ಮಂಗಳೂರು ತಹಶೀಲ್ದಾರ್ ಕಚೇರಿಗೆ ಮಂಗಳವಾರ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಲಂಚ ಪಡೆಯುತ್ತಿದ್ದ ಸಿಬ್ಬಂದಿಯನ್ನು ಬಂಧಿಸಿದ್ದಾರೆ.
ಎಸ್‌ಡಿಎ ರಫೀಕ್ ಅಬ್ದುಲ್ (42) ಬಂಧಿತ ಎಂದು ತಿಳಿದುಬಂದಿದೆ.
ಕೆಲಸವೊಂದನ್ನು ಮಾಡಿಕೊಡಲು ₹40 ಸಾವಿರ ಬೇಡಿಕೆ ಇಟ್ಟಿದ್ದ ಎಂಬ ಆರೋಪ ಇತ್ತು.
ಎಸಿಬಿ ಕಚೇರಿಯಲ್ಲಿ ದೂರು ದಾಖಲಿಸಿದ್ದ ಸಂತ್ರಸ್ತರು, ಆರೋಪಿಗೆ ನಗದು ನೀಡುತ್ತಿದ್ದ ಸಂದರ್ಭ ಎಸಿಬಿ ದಾಳಿ ನಡೆಸಲಾಗಿದೆ. ಆರೋಪಿಯನ್ನು ಬಂಧಿಸಿ, ಲಂಚದ ಮೊತ್ತವನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.