ಮಂಗಳೂರು: ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿನ ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯನಿರ್ವಾಹಕ ಎಂಜಿನಿಯರ್ ಜಿ. ಶ್ರೀಧರ್ ಅವರ ಮನೆ ಹಾಗೂ ಕಚೇರಿಗೆ ಎಸಿಬಿ ಅಧಿಕಾರಿಗಳು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ರಾಜ್ಯದ ಒಂಬತ್ತು ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ, ಕಚೇರಿಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯ ಭಾಗವಾಗಿ ಮಂಗಳೂರಲ್ಲೂ ಎಸಿಬಿ ದಾಳಿ ನಡೆದಿದೆ.
ಮಂಗಳೂರಿನಲ್ಲಿ ಜಿ.ಶ್ರೀಧರ್ ಅವರಿಗೆ ಸೇರಿದ ಮನೆ ಹಾಗೂ ಜಿಲ್ಲಾಧಿಕಾರಿ ಕಚೇರಿಯ ನಗರಾಭಿವೃದ್ಧಿ ಕೋಶದ ಕಚೇರಿಯಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಎಸಿಬಿ ಅಧಿಕಾರಿಗಳು ಶ್ರೀಧರ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಎಸಿಬಿ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.