ಬೆಳ್ತಂಗಡಿ: ಗುರುವಾಯನಕೆರೆ- ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ಎರಡು ಕಾರುಗಳು ಸೋಮವಾರ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಂಭೀರ ಗಾಯಗೊಂಡಿದ್ದಾರೆ.
ಅಳದಂಗಡಿಯಿಂದ ಗುರುವಾಯನಕೆರೆ ಕಡೆ ತೆರಳುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳದತ್ತ ಪ್ರಯಾಣಿಸುತ್ತಿದ್ದ ಕಾರುಗಳು ಪರಸ್ಪರ ಅಪಘಾತಕ್ಕೀಡಾಗಿವೆ. ಗುರುವಾಯನಕೆರೆ ಕಡೆ ಬರುತ್ತಿದ್ದ ಕಾರಿನಲ್ಲಿದ್ದ ಗೇರುಕಟ್ಟೆಯ ಕುಸುಮಾವತಿ (75), ಭಾಗ್ಯವತಿ (50) ಹಾಗೂ ವೈಭವ್ (23) ಗಂಭೀರ ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಾಯಾಳುಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.