ಮೂಲ್ಕಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಮೂಲ್ಕಿ ಕೊಲ್ನಾಡ್ ಬಳಿ ಆಮ್ನಿ ಮತ್ತು ಸ್ಕೂಟರ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಯುವಕ ಗಂಭೀರ ಗಾಯಗೊಂಡಿದ್ದಾರೆ.
ಕೊಲ್ನಾಡ್ ನಿವಾಸಿ ಫೋರಮ್ ಮಾಲ್‌ನ ಪೂರ್ವಿಕಾ ಮೊಬೈಲ್ ಶಾಪ್‌ನ ಉದ್ಯೋಗಿ ಮನೀಶ್ (22) ಗಾಯಗೊಂಡವರು. ಮನೀಶ್ ಅವರ ಕಾಲು, ಕೈ ತಲೆಯ ಭಾಗಕ್ಕೆ ಗಾಯಗಳಾಗಿದ್ದು, ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.